EducationKarnataka NewsPolitics

*ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್: ಶೀಘ್ರವೇ 17,000 ಶಿಕ್ಷಕರ ನೇಮಕ:  ಶಿಕ್ಷಣ ಸಚಿವ ಮಧು ಬಂಗಾರಪ್ಪ*

ಪ್ರಗತಿವಾಹಿನಿ ಸುದ್ದಿ: ಶೀಘ್ರವೇ 17,000 ಶಿಕ್ಷಕರ ನೇಮಕಾತಿ ಮಾಡಿಕೊಳ್ಳಲು ಶಿಕ್ಷಣ ಇಲಾಖೆ ಮುಂದಾಗಲಿದೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ.

ಈ ಕುರಿತು ಬೆಂಗಳೂರಿನಲ್ಲಿ ಮಾತನಾಡಿದ ಅವರು, ಪ್ರಸ್ತುತ ರಾಜ್ಯದ ಸರ್ಕಾರಿ ಶಾಲೆಗಳಿಗೆ 11,000 ಹಾಗೂ ಅನುದಾನಿತ ಶಾಲೆಗಳಿಗೆ 6,500 ಶಿಕ್ಷಕರನ್ನು ನೇಮಕ ಮಾಡಿಕೊಳ್ಳಲು ತೀರ್ಮಾನಿಸಲಾಗಿದೆ ಎಂದು ತಿಳಿಸಿದ್ದಾರೆ.

ಆ ಮೂಲಕ ಒಟ್ಟು 17,000 ಶಿಕ್ಷಕರ ನೇಮಕಾತಿಗೆ ರಾಜ್ಯ ಸರ್ಕಾರ ಅಸ್ತು ಎಂದಿದೆ. ಈ ಪೈಕಿ ಕಲ್ಯಾಣ ಕರ್ನಾಟಕ ಭಾಗದಲ್ಲಿ ಒಟ್ಟು 11,000 ಶಿಕ್ಷಕರ ನೇಮಕಾತಿ ಸೇರಿದಂತೆ ಒಟ್ಟು 17,000 ಶಿಕ್ಷಕರ ನೇಮಕಾತಿ ಶೀಘ್ರವೇ ನಡೆಯಲಿದೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button