Latest

ಸುಳವಾದಿ ಘಟನೆ: ಅಗತ್ಯವಿದ್ದರೆ ಖಾಸಗಿ ವೈದ್ಯರ ಸೇವೆ ಪಡೆಯಲು ಮುಖ್ಯಮಂತ್ರಿ ಸೂಚನೆ

*

ಪ್ರಗತಿವಾಹಿನಿ ಸುದ್ದಿ, ಬೆಂಗಳೂರು

ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರು ಇಂದು ಬೆಳಿಗ್ಗೆ ಚಾಮರಾಜನಗರ ಜಿಲ್ಲಾ ಉಸ್ತುವಾರಿ ಸಚಿವ ಪುಟ್ಟರಂಗಶೆಟ್ಟಿ ಹಾಗೂ ಸಣ್ಣ ನೀರಾವರಿ ಸಚಿವ ಸಿ.ಎಸ್. ಪುಟ್ಟರಾಜು ಮತ್ತು ಹಿರಿಯ ಅಧಿಕಾರಿಗಳೊಂದಿಗೆ ನಿರಂತರ ಸಂಪರ್ಕದಲ್ಲಿದ್ದು ಸುಳವಾಡಿ ಘಟನೆಯ ಮಾಹಿತಿ ಪಡೆಯುತ್ತಿದ್ದಾರೆ ಅಲ್ಲದೆ, ಚಾಮರಾಜನಗರ ಹಾಗೂ ಮೈಸೂರು ಜಿಲ್ಲೆಗಳ ಜಿಲ್ಲಾಧಿಕಾರಿಗಳು ಹಾಗೂ ಚಾಮರಾಜನಗರ ಪೋಲಿಸ್ ವರಿಷ್ಠಾಧಿಕಾರಿಗಳೊಂದಿಗೆ ಮಾತನಾಡಿ
ಈ ಘಟನೆಯಲ್ಲಿ ವಿಷಾಹಾರ ಸೇವಿಸಿ ಅಸ್ವಸ್ಥಗೊಂಡವರು ಅಕ್ಕಪಕ್ಕದ ಗ್ರಾಮಗಳಲ್ಲಿ ಇದ್ದಾರೆಯೇ ಎಂದು ಪತ್ತೆ ಹಚ್ಚಿ ಅವರ ಚಿಕಿತ್ಸೆಗೆ ಕ್ರಮ ಕೈಗೊಳ್ಳಲು ಸೂಚಿಸಿದರು.
ಇದಲ್ಲದೆ ಆಸ್ಪತ್ರೆಗಳಲ್ಲಿ ತಜ್ಞ ವೈದ್ಯರ ಕೊರತೆ ಇದ್ದಲ್ಲಿ ಖಾಸಗಿ ವೈದ್ಯರ ಸೇವೆ ಪಡೆಯುವಂತೆ ಸೂಚಿಸಿದರು.
ಪ್ರಕರಣದ ತನಿಖೆಯನ್ನು ಶೀಘ್ರವೇ ಪೂರ್ಣಗೊಳಿಸಿ ಘಟನೆಗೆ ಕಾರಣ ಪತ್ತೆ ಮಾಡುವಂತೆ ತಿಳಿಸಿದರು.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button