ಪ್ರಗತಿವಾಹಿನಿ ಸುದ್ದಿ, ಬೆಳಗಾವಿ
ಅಂತೂ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಗೆ ಮುಹೂರ್ತ ಫಿಕ್ಸ್ ಆಗಿದೆ. ಡಿ.18ರಂದು ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ, ಮಾಜಿ ಮುಖ್ಯಮಂತ್ರಿ, ಸಿದ್ದರಾಮಯ್ಯ ಸಿಎಲ್ ಪಿ ಮೀಟಿಂಗ್ ಕರೆದಿದ್ದಾರೆ. ಅಂದು ಬೆಳಗ್ಗೆ 9 ಗಂಟೆಗೆ ಸುವರ್ಣ ವಿಧಾನಸೌಧದ 3ನೇ ಮಹಡಿಯಲ್ಲಿರುವ ಸಮ್ಮೇಳನ ಸಭಾಂಗಣದಲ್ಲಿ ಸಭೆ ಆಯೋಜಿಸಲಾಗಿದೆ.
ಈ ಹಿಂದೆ ಕರೆಯಲಾಗಿದ್ದ ಸಭೆ ಸಿದ್ದರಾಮಯ್ಯ ವಿದೇಶ ಪ್ರವಾಸದ ಹಿನ್ನೆಲೆಯಲ್ಲಿ ರದ್ದಾಗಿತ್ತು. ಆ ಸಭೆಗೆ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರನ್ನೂ ಆಹ್ವಾನಿಸಲಾಗಿತ್ತು.
ಈಗಿನ ಸಭೆಯಲ್ಲಿ ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ, ಕೆಪಿಸಿಸಿ ಅಧ್ಯಕ್ಷ ದಿನೇಶ ಗುಂಡೂರಾವ್, ಕಾರ್ಯಾಧ್ಯಕ್ಷ ಈಶ್ವರ ಖಂಡೆ ಉಪಸ್ಥಿತರಿರಲಿದ್ದಾರೆ ಎಂದು ಸಿದ್ದರಾಮಯ್ಯ ತಿಳಿಸಿದ್ದಾರೆ.
ಸಭೆಗೆ ಎಲ್ಲ ಶಾಸಕರೂ ತಪ್ಪದೆ ಹಾಜರಿರಬೇಕೆಂದು ಅವರು ಸೂಚಿಸಿದ್ದಾರೆ.
ಸಚಿವಸಂಪುಟ ವಿಸ್ತರಣೆ ಪದೇ ಪದೆ ಮುಂದಕ್ಕೆ ಹೋಗುತ್ತಿರುವುದರಿಂದ ಈ ಸಭೆ ಭಾರೀ ಕುತೂಹಲ ಕೆರಳಿಸಿದೆ.
ಸಧ್ಯ ವಿದೇಶ ಪ್ರವಾಸದಲ್ಲಿರುವ ಸಿದ್ದರಾಮಯ್ಯ ಅಂದೇ ಬೆಳಗಾವಿಗೆ ಆಗಮಿಸಿ ಅಧಿವೇಶನದಲ್ಲಿಭಾಗವಹಿಸಲಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ