Latest

ಇಂದಿನಿಂದ 18 ರೈಲುಗಳ ಸಂಚಾರ ದಿಢೀರ್ ರದ್ದು

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಮಂಗಳೂರಿನ ಪಡೀಲು ಹಾಗೂ ಕುಲಶೇಖರ ರೈಲು ನಿಲ್ದಾಣಗಳ ನಡುವೆ ರೈಲ್ವೆ ಕಾಮಗಾರಿ ಆರಂಭವಾಗಲಿದ್ದು, ಈ ಹಿನ್ನೆಲೆಯಲ್ಲಿ ಇಂದಿನಿಂದ ಮಂಗಳೂರು ಭಾಗವಾಗಿ ತೆರಳುವ 18 ರೈಲುಗಳ ಸಂಚಾರ ತಾತ್ಕಾಲಿಕ ರದ್ದುಗೊಳಿಸಲಾಗಿದೆ.

ಈ ಕುರಿತು ದಿಢೀರ್ ಆದೇಶ ಹೊರಡಿಸಲಾಗಿದ್ದು, ಪ್ರಯಾಣಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಸುಬ್ರಹ್ಮಣ್ಯ ರಸ್ತೆ-ಮಂಗಳೂರು ಸೆಂಟ್ರಲ್ (ಗಾಡಿ ನಂ.06488/06489) ವಿಶೇಷ ರೈಲು
ಮಂಗಳೂರು ಸೆಂಟ್ರಲ್ ಕಬಕ ಪುತ್ತೂರು ಪ್ರಯಾಣಿಕರ ರೈಲು (06487/06486) ಮಾರ್ಚ್​ 17ರಿಂದ ಮಾರ್ಚ್​ 20ರವರೆಗೆ ಸಂಚರಿಸುವುದಿಲ್ಲ.
ಪುಣೆ- ಎರ್ನಾಕುಲಂ ಎಕ್ಸ್‌ಪ್ರೆಸ್ ರೈಲು(11097/11098) ಮಾ.19ರಂದು ಮತ್ತು 21ರಂದು
ಯಶವಂತಪುರ- ಕಾರವಾರ ಎಕ್ಸ್‌ಪ್ರೆಸ್ ರೈಲುಗಳ ಸಂಚಾರ(16515/16516) ಮಾ.18 ಮತ್ತು 19ರಂದು ಸಂಚರಿಸುವುದಿಲ್ಲ.
ಯಶವಂತಪುರ-ಮಂಗಳೂರು ಎಕ್ಸ್‌ಪ್ರೆಸ್ (16575/16576) ಮಾರ್ಚ್​.17 ರಿಂದ
ಯವಂತಪುರ-ಮಂಗಳೂರು ಬೆಂಗಳೂರು-ಕಾರವಾರ ಎಕ್ಸ್‌ಪ್ರೆಸ್(16595/16596)
ಯಶವಂತಪುರ-ಕಣ್ಣೂರು ಎಕ್ಸ್‌ಪ್ರೆಸ್(16511/16511)
ಕೆಎಸ್ಆರ್ ಬೆಂಗಳೂರು – ಮಂಗಳೂರು ಸೆಂಟ್ರಲ್ ಎಕ್ಸ್‌ಪ್ರೆಸ್(16585/16586) ರೈಲುಗಳು ಮಾ.19 ಮತ್ತು 20ರಂದು ಸಂಚರಿಸುವುದಿಲ್ಲ ಎಂದು ನೈರುತ್ಯ ರೈಲ್ವೆತಿಳಿಸಿದೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button