ಪ್ರಥಮ ಪಿಯುಸಿ ಪರೀಕ್ಷಾ ಫಲಿತಾಂಶ ಪ್ರಕಟ

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಕಳೆದ ಫೆಬ್ರುವರಿ ಯಲ್ಲಿ ನಡೆದ ಪ್ರಥಮ ಪಿಯುಸಿ ವಿದ್ಯಾರ್ಥಿಗಳ ಪರೀಕ್ಷೆಯ ಫಲಿತಾಂಶ ಪ್ರಕಟವಾಗಿದೆ. ಲಾಕ್​ಡೌನ್​ ಹಿನ್ನೆಲೆ ಸುವಿದ್ಯಾ ವೆಬ್​ಸೈಟ್​ನಲ್ಲಿ ಪರೀಕ್ಷೆಯ ಫಲಿತಾಂಶವನ್ನು ಪ್ರಕಟಿಸಲಾಗಿದೆ.

ಪ್ರಥಮ ಪಿಯುಸಿ ಪರೀಕ್ಷೆ ಬರೆದಿರುವ ವಿದ್ಯಾರ್ಥಿಗಳು ಸುವಿದ್ಯಾ ವೆಬ್​ಸೈಟ್​ನಲ್ಲಿ ಫಲಿತಾಂಶವನ್ನು ವೀಕ್ಷಿಸಬಹುದು. ಹಾಗೇ, ವಿದ್ಯಾರ್ಥಿಗಳ ನೋಂದಾಯಿತ ಮೊಬೈಲ್​ ನಂಬರ್​ಗಳಿಗೆ ಕೂಡ ಫಲಿತಾಂಶವನ್ನು ಕಳುಹಿಸುವ ವ್ಯವಸ್ಥೆ ಮಾಡಲಾಗಿದೆ.

ಶಾಲೆಗಳಲ್ಲಿ ಫಲಿತಾಂಶ ವೀಕ್ಷಿಸಲು ವಿದ್ಯಾರ್ಥಿಗಳು ಗುಂಪು ಸೇರುವ ಸಾಧ್ಯತೆ ಇರುವುದರಿಂದ ಕೊರೊನಾ ಸೋಂಕು ಹರಡುವ ಭೀತಿಯಿಂದ ಸುವಿದ್ಯಾ ವೆಬ್​ ಪೋರ್ಟಲ್​ನಲ್ಲಿ ಫಲಿತಾಂಶ ಪ್ರಕಟಿಸಲಾಗಿದೆ. ವಿದ್ಯಾರ್ಥಿಗಳು ತಮ್ಮ ರಿಜಿಸ್ಟ್ರೇಷನ್ ನಂಬರ್​ ಮತ್ತು ಹುಟ್ಟಿದ ದಿನಾಂಕವನ್ನು ನಮೂದಿಸಿ, ಫಲಿತಾಂಶವನ್ನು ವೀಕ್ಷಿಸಬಹುದು.

http://result.bspucpa.com

 

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button