Latest

ಆಟವಾಡುತ್ತಾ ಕಟ್ಟಡದಿಂದ ಬಿದ್ದ ಮಗು; ದುರ್ಮರಣ

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಕಟ್ಟಡದ ಮೇಲಿಂದ ಬಿದ್ದು ಒಂದುವರೆ ವರ್ಷದ ಮಗು ಮೃತಪಟ್ಟ ದಾರುಣ ಘಟನೆ ಚಾಮರಾಜಪೇಟೆಯ ಆಜಾದ್ ನಗರದ 6ನೇ ಕ್ರಾಸ್ ನಲ್ಲಿ ನಡೆದಿದೆ.

ಒಂದುವರೆ ವರ್ಷದ ಮಗು ದೀಕ್ಷಾ ಮೃತ ಕಂದಮ್ಮ. ವಿನಯ್ ದಂಪತಿ ಮಗು ದೀಕ್ಷಾಳನ್ನು ಕರೆದುಕೊಂಡು ಸ್ನೇಹಿತರ ಮನೆಗೆ ಹೋಗಿದ್ದರು. ಈ ವೇಳೆ ಆಟವಾಡುತ್ತಿದ್ದ ಮಗು ಆಕಸ್ಮಿಕವಾಗಿ ಕಟ್ಟಡದ ಮೇಲಿಂದ ಕೆಳಗೆ ಬಿದ್ದಿದೆ.

ತಕ್ಷಣ ಮಗುವನ್ನು ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಅಷ್ಟರಲ್ಲೇ ಮಗು ಕೊನೆಯುಸಿರೆಳೆದಿದ್ದಳು.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button