ಪ್ರಗತಿವಾಹಿನಿ ಸುದ್ದಿ : ಬುಧವಾರ ಬೆಳ್ಳಂ ಬೆಳಗ್ಗೆ ಸಂಭವಿಸಿದ ಪ್ರತ್ಯೇ ಎರಡು ದುರ್ಘಟೆಯಲ್ಲಿ 14 ಜನರು ಸಾವಿಗೀಡಾಗಿದ್ದಾರೆ.
ಯಲ್ಲಾಪುರದಲ್ಲಿ ನಡೆದ ಅಪಘಾತದಲ್ಲಿ 10 ಜನರು ಸಾವಿಗೀಡಾಗಿದ್ದಾರೆ. ಅರಬೈಲ್ ಘಾಟಿಯಲ್ಲಿ ತರಕಾರಿ ಲಾರಿ ಪಲ್ಟಿಯಾಗಿ 10 ಜನರು ಸಾವನ್ನಪ್ಪಿದ್ದು, 15ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಹಾವೇರಿ ಜಿಲ್ಲೆ ಸವಣೂರಿನಿಂದ ಕುಮಟಾಕ್ಕೆ ತೆರಳುತ್ತಿದ್ದ ಲಾರಿ ಪಲ್ಟಿಯಾಗಿದೆ. ಗಾಯಗೊಂಡವರನ್ನು ವಿವಿಧ ಆಸ್ಪತ್ರೆಗಳಿಗೆ ಸಾಗಿಸಲಾಗಿದೆ.
ಮಂತ್ರಾಲಯದಿಂದ ಆನೆಗುಂದಿಗೆ ಆರಾಧನೆಗೊಂದು ಹೋಗುತ್ತಿದ್ದ 4 ವಿದ್ಯಾರ್ಥಿಗಳು ಸಾವಿಗೀಡಾಗಿದ್ದಾರೆ. ಕ್ರೂಸರ್ ಪಲ್ಟಿಯಾಗಿ ಈ ಅವಘಡ ಸಂಭವಿಸಿದೆ. ಚಾಲಕ ಕೂಡ ಸಾವನ್ನಪ್ಪಿದ್ದಾನೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ