
ಪ್ರಗತಿವಾಹಿನಿ ಸುದ್ದಿ; ಬಾಗಲಕೋಟೆ: ಬಗಲಕೋಟೆ ಜಿಲ್ಲೆಯಲ್ಲಿ ಚುನಾವಣಾಧಿಕಾರಿಗಳು ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ದಾಖಲೆ ಇಲ್ಲದೇ ಸಾಗಿಸುತ್ತಿದ್ದ ಬರೋಬ್ಬರಿ 2.10 ಕೋಟಿ ರೂಪಾಯಿ ಹಣವನ್ನು ಜಪ್ತಿ ಮಾಡಿದ್ದಾರೆ.
ಹುನ್ನೂರು ಚೆಕ್ ಪೋಸ್ಟ್ ನಲ್ಲಿ ಚುನಾವಣಾಧಿಕಾರಿಗಳು ಮುಧೋಳದಿಂದ ಅಥಣಿ ಕಡೆಗೆ ತೆರಳುತ್ತಿದ್ದ ಬೊಲೆರೊ ವಾಹನವನ್ನು ತಪಾಸಣೆ ನಡೆಸಿದಾಗ 2.10 ಕೋಟಿ ನಗದು ಹಣ ಪತ್ತೆಯಾಗಿದೆ. ಇಬ್ಬರನ್ನು ವಶಕ್ಕೆ ಪಡೆದಿರುವ ಅಧಿಕಾರಿಗಳು ವಿಚಾರಣೆ ನಡೆಸಿದ್ದಾರೆ.
ಸಹಕಾರಿ ಬ್ಯಾಂಕ್ ಶಾಖೆಗೆ ಹಣ ಸಾಗಿಸಲಾಗುತ್ತಿತ್ತು ಎಂದು ತಿಳಿದುಬಂದಿದೆ. ಆದರೆ ಹಣದ ಬಗ್ಗೆ ಸೂಕ್ತ ದಾಖಲೆ ಇಲ್ಲದ ಕಾರಣ ಹಣವನ್ನು ಜಪ್ತಿ ಮಾಡಿಕೊಳ್ಳಲಾಗಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ