Latest

ಕೊರೊನಾ ಅಟ್ಟಹಾಸ; ಒಂದೇ ದಿನದಲ್ಲಿ ದಾಖಲೆಯ 2.17ಲಕ್ಷ ಜನರಲ್ಲಿ ಸೋಂಕು ದೃಢ

ಪ್ರಗತಿವಾಹಿನಿ ಸುದ್ದಿ; ನವದೆಹಲಿ: ಭಾರತದಲ್ಲಿ ಕೊರೊನಾ 2ನೇ ಅಲೆ ಅಬ್ಬರ ಭಯಾನಕ ಸ್ಥಿತಿಯತ್ತ ತಲುಪಿತ್ತಿದ್ದು, ಕಳೆದ 24 ಗಂಟೆಯಲ್ಲಿ 2,17,353 ಜನರಲ್ಲಿ ಸೋಂಕು ಪತ್ತೆಯಾಗಿದೆ. ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 1,42,91,917ಕ್ಕೆ ಏರಿಕೆಯಾಗಿದೆ.

ನಿನ್ನೆ ಒಂದೇ ದಿನದಲ್ಲಿ 1,185 ಜನರು ಮಹಾಮಾರಿಗೆ ಬಲಿಯಾಗಿದ್ದಾರೆ. ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿಗೆ ಬಲಿಯಾದವರ ಸಂಖ್ಯೆ 1,74,308 ಕ್ಕೆ ಏರಿಕೆಯಾಗಿದೆ.

Related Articles
Home add -Advt

ಇನ್ನು ದೇಶದಲ್ಲಿ 15,69,743 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು 1,25,47,866 ಸೋಂಕಿತರು ಗುಣಮುಖರಾಗಿದ್ದಾರೆ. ಕಳೆದ 24 ಗಂಟೆಯಲ್ಲಿ 1,18,302 ಸೋಂಕಿತರು ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ. ದೇಶದಲ್ಲಿ ಈವರೆಗೆ 11,72,23,509 ಜನರಿಗೆ ವ್ಯಾಕ್ಸಿನ್ ನೀಡಲಾಗಿದೆ.
ಕೊರೊನಾ ಸೋಂಕಿಗೆ ತುತ್ತಾದ ಕಾಂಗ್ರೆಸ್ ನಾಯಕ ರಣದೀಪ್ ಸುರ್ಜೆವಾಲಾ

Related Articles

Back to top button