Latest

2-3 ದಿನದಲ್ಲಿ ಸ್ಥಾನ ಹಂಚಿಕೆ -ಸಿದ್ದರಾಮಯ್ಯ

ಪ್ರಗತಿವಾಹಿನಿ ಸುದ್ದಿ, ಹುಬ್ಬಳ್ಳಿ

ಕಾಂಗ್ರೆಸ್-ಜೆಡಿಎಸ್ ಮಧ್ಯೆ ಲೋಕಸಭಾ ಸ್ಥಾನ ಹಂಚಿಕೆ 2-3 ದಿನದಲ್ಲಿ ಅಂತಿಮವಾಗಲಿದೆ ಎಂದು ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ ಹೇಳಿದ್ದಾರೆ.

ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, ಅವರು 12 ಸ್ಥಾನ ಕೇಳಿದ್ದಾರೆ. ಮೊದಲ ಸುತ್ತಿನ ಮಾತುಕತ ಅಷ್ಟೆ ಆಗಿದೆ. ಇನ್ನೊಮ್ಮೆ ಚರ್ಚಿಸಿ ಅಂತಿಮಗೊಳಿಸಲಾಗುವುದು. ಅಂತಹ ದೊಡ್ಡ ಸಮಸ್ಯೆ ಏನಿಲ್ಲ ಎಂದರು.

ಸುಮಲತಾ ಮಂಡ್ಯದಿಂದ ಸ್ಪರ್ಧಿಸುವುದಾಗಿ ಹೇಳುತ್ತಿದ್ದಾರೆ. ಆದರೆ ಮಂಡ್ಯವನ್ನು ಜೆಡಿಎಸ್ ಗೆ ಬಿಟ್ಡುಕೊಡಬೇಕಿದೆ. ಹಾಗಾಗಿ ಅವರಿಗೆ ಟಿಕೆಟ್ ಕೊಡಲು ಸಾಧ್ಯವಿಲ್ಲ. ಈ ಬಗ್ಗೆ ಮಾತನಾಡಿ ಅವರ ಮನವೊಲಿಸಲಾಗುವುದು. ಅವರು ಸ್ವತಂತ್ರವಾಗಿ ಸ್ಪರ್ಧಿಸುವ ಬಗ್ಗೆ ನನಗೆ ಗೊತ್ತಿಲ್ಲ ಎಂದರು ಸಿದ್ದರಾಮಯ್ಯ.

ಜೆಡಿಎಸ್, ಕಾಂಗ್ರೆಸ್ ಸೇರಿ ಕನಿಷ್ಟ 20 ಸ್ಥಾನ ಗೆಲ್ಲುತ್ತೇವೆ. ಈ ಬಗ್ಗೆ ಅನುಮಾನ ಬೇಡ ಎಂದು ಅವರು ಹೇಳಿದರು.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button