ಪ್ರಗತಿವಾಹಿನಿ ಸುದ್ದಿ; ಚಿಕ್ಕಬಳ್ಳಾಪುರ: ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಅಕ್ರಮ ಹಣ, ಚಿನ್ನ, ಬೆಳ್ಳಿ, ಮದ್ಯ ಸಾಗಾಟಗಳ ಮೇಲೆ ನಿಗಾ ವಹಿಸಿರುವ ಪೊಲೀಸರು ಅಪಾರ ಪ್ರಮಾಣದ ನಗದು, ವಸ್ತುಗಳನ್ನು ವಶಪಡಿಸಿಕೊಳ್ಳುತ್ತಿದ್ದಾರೆ.
ಅಕ್ರಮವಾಗಿ ಸಾಗಿಸುತ್ತಿದ್ದ ಬರೋಬ್ಬರಿ 2.65 ಕೋಟಿ ಮೌಲ್ಯದ ಚಿನ್ನಾಭರಣಗಳನ್ನು ಚಿಕ್ಕಬಳ್ಳಾಪುರ ಬಾಗೇಪಲ್ಲಿ ಚೆಕ್ ಪೋಸ್ಟ್ ನಲ್ಲಿ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.
ಮತದಾರರನ್ನು ಸೆಳೆಯುವ ನಿಟ್ಟಿನಲ್ಲಿ ಈ ಚಿನ್ನಾಭರಣಗಳನ್ನು ಬೆಂಗಳೂರಿಗೆ ಸಾಗಿಸಲಾಗುತ್ತಿತ್ತು ಎನ್ನಲಾಗಿದೆ. ಸೂಕ್ತ ದಾಖಲೆಗಳಿಲ್ಲದೇ ಚಿನ್ನಾಭರಣ ಸಾಗಿಸುತ್ತಿದ್ದ ಹಿನ್ನೆಲೆಯಲ್ಲಿ ಪೊಲೀಸರು ಜಪ್ತಿ ಮಾಡಿದ್ದಾರೆ.
ಇದೇ ವೇಳೆ ಬಾಗೇಪಲ್ಲಿ ಚೆಕ್ ಪೋಸ್ಟ್ ನಲ್ಲಿ 35 ಲಕ್ಷ ಮೌಲ್ಯದ ಮದ್ಯವನ್ನು ಕೂಡ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ