Uncategorized

*ಮತ್ತೊಂದು ಭೀಕರ ಅಪಘಾತ; 6 ಜನರು ಸ್ಥಳದಲ್ಲೇ ಸಾವು*

ಪ್ರಗತಿವಾಹಿನಿ ಸುದ್ದಿ; ವಿಜಯನಗರ: ವಡ್ಡರಹಳ್ಳಿ ಸೇತುವೆ ಬಳಿ ಸಂಭವಿಸಿದ ಭೀಕರ ಅಪಘಾತದಲ್ಲಿ 6 ಜನರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ವಿಜಯನಗರ ಜಿಲ್ಲೆಯ ಹೊಸಪೇಟೆ ತಾಲೂಕಿನಲ್ಲಿ ನಡೆದಿದೆ.

ಎರಡು ಆಟೋ ಹಾಗೂ ಲಾರಿ ನಡುವೆ ಮುಖಾ ಮುಖಿ ಡಿಕ್ಕಿ ಸಂಭವಿಸಿದ್ದು, ಆಟೋದಲ್ಲಿ ಪ್ರಯಾಣಿಸುತ್ತಿದ್ದ 6 ಜನರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮೃತದೇಹಗಳು ಚಲ್ಲಾಪಿಲ್ಲಿಯಾಗಿ ಬಿದ್ದಿವೆ.

ಅಪಘಾತದಲ್ಲಿ ಹಲವರು ಗಾಯಗೊಂಡಿದ್ದು, ಗಾಯಾಳುಗಳನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನಾ ಸ್ಥಳಕ್ಕೆ ಹೊಸಪೇಟೆ ಗ್ರಾಮಾಂತರ ಠಾಣೆ ಪೊಲೀಸರು ಭೇಟಿ ನೀಡಿದ್ದಾರೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button