Uncategorized

*ಭೀಕರ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ 7ಕ್ಕೆ ಏರಿಕೆ; ಮೃತರ ಕುಟುಂಬಕ್ಕೆ ಪರಿಹಾರ ಘೋಷಣೆ*

ಪ್ರಗತಿವಾಹಿನಿ ಸುದ್ದಿ; ವಿಜಯನಗರ: ವಡ್ಡರಹಳ್ಳಿ ಸೇತುವೆ ಬಳಿ ಸಂಭವಿಸಿದ ಭೀಕರ ಅಪಘಾತದಲ್ಲಿ ಆಟೋ ಚಾಲಕ ಸೇರಿ 7 ಜನರು ಸಾವನ್ನಪ್ಪಿದ್ದಾರೆ.

ವಿಜಯನಗರ ಜಿಲ್ಲೆಯ ಹೊಸಪೇಟೆ ತಾಲೂಕಿನ ವಡ್ಡರಹಳ್ಲಿ ಸೇತುವೆ ಬಳಿ ಎರಡು ಆಟೋ ಹಾಗೂ ಲಾರಿ ನಡುವೆ ಮುಖಾ ಮುಖಿ ಡಿಕ್ಕಿಯಾಗಿ ಅಪಘಾತ ಸಂಭವಿಸಿತ್ತು. ಇದೀಗ ಅಪಘಾತದಲ್ಲಿ ಐವರು ಪುರುಷರು ಇಬ್ಬರು ಮಹಿಳೆಯರು ಸೇರಿ 7 ಜನರು ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.

ಆಟೋಗಳಲ್ಲಿ ಒಟ್ಟು 19 ಜನರು ಪ್ರಯಾಣಿಸುತ್ತಿದ್ದರು. ಎಲ್ಲರೂ ಟಿಬಿ ಡ್ಯಾಂ ನೋಡಲು ತೆರಳುತ್ತಿದ್ದರು. ಈ ವೇಳೆ ಅಪಘಾತ ಸಂಭವಿಸಿದೆ. ಗಂಭೀರವಾಗಿ ಗಾಯಗೊಂಡಿರುವ ಮೂವರನ್ನು ವಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.

Home add -Advt

ಇನ್ನು ಸಿಎಂ ಸಿದ್ದರಾಮಯ್ಯ ಸೂಚನೆ ಮೇರೆಗೆ ಅಪಘಾತದಲ್ಲಿ ಸಾವನ್ನಪ್ಪಿದ ಮೃತರ ಕುಟುಂಬಕ್ಕೆ 2 ಲಕ್ಷ ಪರಿಹಾರ ಘೋಷಣೆ ಮಾಡಲಾಗಿದೆ ಎಂದು ಸಚಿವ ನಾಗೇಂದ್ರ ತಿಳಿಸಿದ್ದಾರೆ. ಅಪಘಾತದಲ್ಲಿ ಗಾಯಗೊಂಡಿರುವವರ ಚಿಕಿತ್ಸಾ ವೆಚ್ಚಕ್ಕೆ 50 ಸಾವಿರ ರೂಪಾಯಿ ಪರಿಹಾರ ನೀಡಲಾಗುವುದು ಎಂದು ತಿಳಿಸಿದ್ದಾರೆ.


Related Articles

Back to top button