Karnataka News

*ಎರಡು ಕಾರು ಭೀಕರ ಅಪಘಾತ: ಮೂವರು ದುರ್ಮರಣ*

ಪ್ರಗತಿವಾಹಿನಿ ಸುದ್ದಿ: ಎರಡು ಕಾರುಗಳ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಸ್ಥಳದಲ್ಲೇ ಮೂವರು ಸಾವನ್ನಪ್ಪಿರುವ ಘಟನೆ ಶಿವಮೊಗ್ಗದಲ್ಲಿ ನಡೆದಿದೆ.

Home add -Advt

ಶಿವಮೊಗ್ಗದ ಲಯನ್ ಸಫಾರಿ ಬಳಿ ಈ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ಮೂವರು ಸಾವನ್ನಪ್ಪಿದ್ದು, ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಶಿವಮೊಗ್ಗ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ.

ಮೃತರನ್ನು ಸಿದ್ದಣ್ಣ, ಚಂದ್ರು ಹಾಗೂ ಇಮಾಮ್ ಸಾಬ್ ಎಂದು ಗುರುತಿಸಲಾಗಿದೆ. ಚಳ್ಳಕೆರೆ ಬೆಳವನ್ನೂರು ಮೂಲದವರು ಎಂದು ತಿಳಿದುಬಂದಿದೆ.

ಶಿವಮೊಗ್ಗ ಸಂಚಾರಿ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ.

Related Articles

Back to top button