Kannada NewsKarnataka NewsLatest

*ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತ; ಸ್ಥಳದಲ್ಲೇ ನಾಲ್ವರು ದುರ್ಮರಣ*

ಪ್ರಗತಿವಾಹಿನಿ ಸುದ್ದಿ; ಹುಬ್ಬಳ್ಳಿ: ಬೆಂಗಳೂರು-ಮುಂಬೈ ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತ ಸಂಭವಿಸಿದ್ದು, ಘಟನೆಯಲ್ಲಿ ನಾಲ್ವರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ನಡೆದಿದೆ.

ಎರಡು ಕಾರು ಹಾಗೂ ಲಾರಿ ನಡುವೆ ಸರಣಿ ಅಪಘಾತ ಸಂಭವಿಸಿ ಈ ದುರಂತ ನಡೆದಿದೆ. ಹಾಸನದ ಮಣಿಕಂಠ( 26), ಪವನ (23), ಚಂದನ( 31), ಬೆಂಗಳೂರಿನ ಪ್ರಭು (34) ಮೃತ ದುರ್ದೈವಿಗಳು.

Home add -Advt

ಘಟನೆಯಲ್ಲಿ ನಾಲ್ವರಿಗೆ ಗಂಭೀರ ಗಾಯಗಳಾಗಿವೆ. ಗಾಯಾಳುಗಳನ್ನು ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಕುಂದಗೋಳ ಪೊಲಿಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ.

ಒಂದು ಕಾರು ಹಾಸನದಿಂದ ಗೋವಾಕ್ಕೆ ತೆರಳುತ್ತಿತ್ತು. ಇನ್ನೊಂದು ಕಾರು ಬೆಂಗಳೂರಿನಿಂದ ಶಿರಡಿಗೆ ತೆರಳುತ್ತಿತ್ತು. ಎರಡು ಕಾರುಗಳ ನಡುವೆ ಅಪಘಾತವಾಗಿದ್ದು, ಬಳಿಕ ಕಾರು ಲಾರಿಗೆ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ.


Related Articles

Back to top button