ಪ್ರಗತಿವಾಹಿನಿ ಸುದ್ದಿ; ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ವಾಯುಮಾಲಿನ್ಯ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ 2 ದಿನ ಲಾಕ್ ಡೌನ್ ಜಾರಿ ಮಾಡುವಂತೆ ಸುಪ್ರೀಂ ಕೋರ್ಟ್ ರಾಜ್ಯ ಸರ್ಕಾರಕ್ಕೆ ಸೂಚನೆ ನೀಡಿದೆ.
ದೆಹಲಿಯಲ್ಲಿ ವಾಯುಮಾಲಿನ್ಯ ಹೆಚ್ಚುತ್ತಿರುವ ಬಗ್ಗೆ 17 ವರ್ಷದ ವಿದ್ಯಾರ್ಥಿ ಆದಿತ್ಯ ದುಬೆ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ವಿಶೇಷ ಪೀಠ, ಕೇಂದ್ರ ಸರ್ಕಾರ ಹಾಗೂ ರಾಜ್ಯ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ದೆಹಲಿಯಲ್ಲಿ ಹೊಗೆಯಿಂದಾಗಿ ಮಾಲಿನ್ಯ ಹೆಚ್ಚುತ್ತಿದ್ದು, ಮನೆಯಲ್ಲಿಯೂ ಮಾಸ್ಕ್ ಹಾಕಿಕೊಂಡು ಓಡಾಡುವ ಪರಿಸ್ಥಿತಿ ನಿರ್ಮಾಣವಾಗಿದೆ. ಜನರು ಉಸಿರಾಡಲು ಕಷ್ಟಪಡುತ್ತಿದ್ದು, ಮಕ್ಕಳು, ವೃದ್ಧರು ಅನಾರೋಗ್ಯಕ್ಕೀಡಾಡುಗುತ್ತಿದ್ದಾರೆ ಇಂತಹ ಸಂದರ್ಭ ಎದುರಾದರೂ ಮುಂಜಾಗೃತಾ ಕ್ರಮದ ಬಗ್ಗೆ ಸರ್ಕಾರ ಮುಂದಾಗದೇ ಬೇಜವಾಬ್ದಾರಿ ಮೆರೆದಿವೆ ಎಂದು ಕಿಡಿಕಾರಿದೆ.
ದೆಹಲಿಯಲ್ಲಿ ಹದಗೆಟ್ಟ ಗಾಳಿ ಗುಣಮಟ್ಟವನ್ನು ನಿಯಂತ್ರಣ ಮಾಡಲು ಎರಡು ದಿನಗಳ ಲಾಕ್ ಡೌನ್ ಜಾರಿ ಮಾಡುವುವಂತೆ ರಾಜ್ಯ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಸೂಚನೆ ನೀಡಿದೆ.
ದೀಪಾವಳಿ ಪಟಾಕಿ, ಪಂಜಾಬ್, ಹರ್ಯಾಣಾದಲ್ಲಿ ಕೃಷಿ ತ್ಯಾಜ್ಯಗಳಿಗೆ ಬೆಂಕಿ ಹಚ್ಚಿದ ಪರಿಣಾಮ ಇತ್ತೀಚಿನ ದಿನಗಳಲ್ಲಿ ದೆಹಲಿಯಾದ್ಯಂತ ದಟ್ಟ ಹೊಗೆ ಆವರಿಸಿದ್ದು, ಉಸಿರಾಟಕ್ಕೆ ಪರದಾಡುವ ಸ್ಥಿತಿ ನಿರ್ಮಾಣವಾಗಿದೆ. ಇದು ಹೀಗೆಯೇ ಮುಂದುವರೆದರೆ ಆರೋಗ್ಯ ತುರ್ತು ಪರಿಸ್ಥಿತಿ ಘೋಷಿಸುವ ಅನಿವಾರ್ಯತೆ ಎದುರಾಗಲಿದೆ ಎಂದು ತಜ್ಞರು ಎಚ್ಚರಿಸಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ