LatestNational

*ತಾಂತ್ರಿಕ ದೋಷ: ಎರಡು ವಿಮಾನಗಳು ತುರ್ತು ಭೂಸ್ಪರ್ಶ*

ಪ್ರಗತಿವಾಹಿನಿ ಸುದ್ದಿ: ತಾಂತ್ರಿಕ ದೋಷ ಕಂಡುಬಂದ ಹಿನ್ನೆಲೆಯಲ್ಲಿ ಎರಡು ವಿಮಾನಗಳು ತುರ್ತು ಭೂಸ್ಪರ್ಶ ಮಾಡಿದ ಪ್ರತ್ಯೇಕ ಘಟನೆ ನಡೆದಿದೆ.

Related Articles

ಸೌದಿ ಏರ್ ಲೈನ್ಸ್ ವಿಮಾನ ಲಕ್ನೋ ವಿಮಾನ ನಿಲ್ದಾಣದಲ್ಲಿ ಇಳಿಯುವಾಗ ವಿಮಾನದ ಚಕ್ರದಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಲ್ಯಾಂಡಿಂಗ್ ಗೇರ್ ನಲ್ಲಿ ತಾಂತ್ರಿಕ ದೋಷ ಕಂಡುಬಂದು ಈ ಘಟನೆ ಸಂಭವಿಸಿದೆ.

ಲ್ಯಾಂಡಿಂಗ್ ವೇಳೆ ವಿಮಾನದ ಚಕ್ರದಲ್ಲಿ ಬೆಂಕಿ ಕಾಣಿಸಿಕೊಂಡಿದೆ. ರನ್ ವೇನಲ್ಲಿ ದಟ್ಟ ಹೊಗೆ ಆವರಿಸಿದೆ. ಅಡೃಷ್ಟವಶಾತ್ ಸ್ವಲ್ಪದರಲ್ಲಿ ಅನಾಹುತ ತಪ್ಪಿದೆ. ತಕ್ಷಣ ವಿಮಾನದಿಂದ ಎಲ್ಲಾ ಪ್ರಯಾಣಿಕರನ್ನು ಸುರಕ್ಷಿತವಾಗಿ ಕೆಳಗಿಳಿಸಲಾಯಿತು. ಲಕ್ನೋದ ಚೌಧರಿ ಚರಣ್ ಸಿಂಗ್ ವಿಮಾನ ನಿಲ್ದಾಣದಲ್ಲಿ ಈ ಘಟನೆ ನಡೆದಿದೆ.

Home add -Advt

ತಾಂತ್ರಿಕ ಸಮಸ್ಯೆ ಸರಿಪಡಿಸಿದ ಬಳಿಕ 20 ನಿಮಿಷಗಳಲ್ಲಿ ಪರಿಸ್ಥಿತಿ ನಿಯಂತ್ರಣಕ್ಕೆ ಬಂದಿತು. ಈ ವಿಮಾನದಲ್ಲಿ ಹಜ್ ಯಾತ್ರೆಗೆ ತೆರಳುವ ಯಾತ್ರಿಕರು ಇದ್ದರು. ಸದ್ಯ ಎಲ್ಲಾ ಪ್ರಯಾಣಿಕರು ಸುರಕ್ಷಿತವಾಗಿದ್ದಾರೆ ಎಂದು ತಿಳಿದುಬಂದಿದೆ.

ಮತ್ತೊಂದೆಡೆ ಚನ್ನೈಗೆ ಹೊರಟಿದ್ದ ಬ್ರಿಟಿಷ್ ಏರ್ ಲೈನ್ಸ್ ವಿಮಾನ ತಾಂತ್ರಿಕ ದೋಷ ಕಂಡುಬಂದ ಹಿನ್ನೆಲೆಯಲ್ಲಿ ಲಂಡನ್ ನಲ್ಲಿ ತುರ್ತು ಭೂಸ್ಪರ್ಶ ಮಾಡಿದೆ.

ವಿಮಾನದಲ್ಲಿ ತಾಂತ್ರಿಕ ದೋಷ ಕಂಡುಬಂದ ಕಾರಣ ಮುನ್ನೆಚ್ಚರಿಕೆ ಕ್ರಮವಾಗಿ ಲಂಡನ್ ನ ಹಿಥ್ರೂ ವಿಮಾನ ನಿಲ್ದಾಣಕ್ಕೆ ಮರಳಿದ್ದು, ಅಲ್ಲಿಯೇ ಲ್ಯಾಂಡಿಂಗ್ ಮಾಡಲಾಗಿದೆ. ಸದ್ಯ ಪ್ರಯಾಣಿಕರು, ಸಿಬ್ಬಂದಿಗಳು ಸುರಕ್ಷಿತರಾಗಿದ್ದಾರೆ ಎಂದು ವಿಮಾನ ಯಾನ ಸಂಸ್ಥೆ ತಿಳಿಸಿದೆ.

ಗುಜರಾತ್ ನ ಅಹಮದಾಬಾದ್ ನಲ್ಲಿ ಏರ್ ಇಂಡಿಯಾ ವಿಮಾನ ತಾಂತ್ರಿಕ ದೋಷದಿಂದ ಪತನಗೊಂಡು ದುರಂತಕ್ಕೀಡಾದ ಬೆನ್ನಲ್ಲೇ ಸಾಲು ಸಾಲು ವಿಮಾನಗಳಲ್ಲಿ ತಾಂತ್ರಿಕ ದೋಷ ಪ್ರಕರಣ ಬೆಳಕಿಗೆ ಬರುತ್ತಿದೆ.


Related Articles

Back to top button