ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಸಂಶೋಧಕ ಎಂ.ಎಂ.ಕಲಬುರ್ಗಿ ಹಾಗೂ ಪತ್ರಕರ್ತೆ ಗೌರಿ ಲಂಕೇಶ್ ಕೊಲೆ ಪ್ರಕರಣಗಳ ವಿಚಾರಣೆಗೆ ರಾಜ್ಯದಲ್ಲಿ ವಿಶೇಷ ಕೋರ್ಟ್ ಸ್ಥಾಪನೆಗೆ ರಾಜ್ಯ ಸರ್ಕಾರ ತೀರ್ಮಾನಿಸಿದೆ.
ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ.
2015ರಲ್ಲಿ ನಡೆದ ಕನ್ನಡ ಸಾಹಿತ್ಯ ಸಂಶೋಧಕ ಎಂ.ಎಂ ಕಲಬುರ್ಗಿ ಹತ್ಯೆ ಹಾಗೂ 2017ರಲ್ಲಿ ನಡೆದ ಪತ್ರಕರ್ತೆ ಗೌರಿಲಂಕೇಶ್ ಹತ್ಯೆ ಹಾಗೂ ಆರೋಪಿಗಳನ್ನು ಈವರೆಗೂ ಬಂಧಿಸಲಾಗಿಲ್ಲ. ಹತ್ಯೆಗೆ ಸುಪಾರಿ ನೀಡಿದ್ದು ಯಾರು, ಯಾವ ಉದ್ದೇಶಕ್ಕಾಗಿ ಹತ್ಯೆ ಮಾಡಲಾಗಿದೆ ಎನ್ನುವುದು ಬಯಲಾಗಿಲ್ಲ.
ಹತ್ಯೆ ನಡೆದು ಹಲವು ವರ್ಷಗಳೇ ಕಳೆದರೂ ವಿಚಾರಣೆ ನಿಧಾನಗತಿಯಲ್ಲಿ ಸಾಗುತ್ತಿದೆ. ಈ ಹಿನ್ನೆಲೆಯಲ್ಲಿ ಈ ಎರಡೂ ಪ್ರಕರಣಗಳ ತ್ವರಿತ ವಿಚಾರಣೆಗೆ ವಿಶೇಷ ನ್ಯಾಯಾಲಯ ರಚಿಸಬೇಕೆಂದು ಕೊಲೆಗೀಡಾದ ವ್ಯಕ್ತಿಗಳ ಕುಟುಂಬಸ್ಥರು ಮನವಿ ಮಾಡಿಕೊಂಡ ಹಿನ್ನೆಲೆಯಲ್ಲಿ, ವಿಶೇಷ ಕೋರ್ಟ್ ಸ್ಥಾಪನೆಗೆ ಸಿಎಂ ಸಿದ್ದರಾಮಯ್ಯ ಸೂಚಿಸಿದ್ದಾರೆ. ಜೊತೆಗೆ ಪೂರ್ಣಾವಧಿ ನ್ಯಾಯಾಧೀಶರ ನೇಮಿಸಲೂ ಸಹ ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿಗೆ ಟಿಪ್ಪಣಿ ಮೂಲಕ ಸೂಚನೆ ನೀಡಿದ್ದಾರೆ ಸೂಚಿಸಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ