ಪ್ರಗತಿ ಮೀಡಿಯಾ ಹೌಸ್, ಬೆಳಗಾವಿ – ಕೇಂದ್ರ ಸರಕಾರದ ಮಹತ್ವಾಕಾಂಕ್ಷೆ ಯೋಜನೆ ಸ್ಮಾರ್ಟ್ ಸಿಟಿ ಯೋಜನೆಯ ಉಸ್ತುವಾರಿಗೆ ಇನ್ನು ಎರಡು ಕಚೇರಿಗಳು ಕಾರ್ಯನಿರ್ವಹಿಸಲಿವೆ.
ಉತ್ತರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಕಾಮಗಾರಿಗಳ ಉಸ್ತುವಾರಿ ಮತ್ತು ಆಡಳಿತಾತ್ಮಕ ಕಚೇರಿ ನಗರಾಭಿವೃದ್ಧಿ ಪ್ರಾಧಿಕಾರ ಕಚೇರಿಯ ಮೊದಲ ಮಹಡಿಯಲ್ಲಿ ಕಾರ್ಯನಿರ್ವಹಿಸಲಿವೆ.
ಸಧ್ಯ ಟಿಳಕವಾಡಿಯಲ್ಲಿರುವ ಸ್ಮಾರ್ಟ್ ಸಿಟಿ ಕಚೇರಿ ಇನ್ನು ಮುಂದೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಕಾಮಗಾರಿಗಳ ಉಸ್ತುವಾರಿ ನಿರ್ವಹಿಸಲಿದೆ.
ಸೋಮವಾರವೇ ಕಚೇರಿ ಸ್ಥಳಾಂತರ ಕಾರ್ಯ ಆರಂಭವಾಗಿದ್ದು, ಮಂಗಳವಾರ ಆಡಳಿತ ಕಚೇರಿ ನಗರಾಭಿವೃದ್ಧಿ ಕಚೇರಿ ಕಟ್ಟಡದಲ್ಲೇ ಕಾರ್ಯನಿರ್ವಹಿಸಿದೆ.
ಟಿಳಕವಾಡಿಲ್ಲಿರುವ ಕಚೇರಿ ಸ್ಮಾರ್ಟ್ ಸಿಟಿಯ ಕಾಮಗಾರಿಗಳಿಗೆ ಮತ್ತು ಸಿಬ್ಬಂದಿಗೆ ತೀರಾ ಇಕ್ಕಟ್ಟಾಗಿತ್ತು. ಹೆಚ್ಚುತ್ತಿರುವ ಸಿಬ್ಬಂದಿಗೆ ಕುಳಿತುಕೊಳ್ಳಲು ಸಹ ಸ್ಥಳಾವಕಾಶವಿರಲಿಲ್ಲ. ಹಾಗಾಗಿ ವಿಶಾಲವಾದ ಜಾಗಕ್ಕೆ ಕಚೇರಿ ಸ್ಥಳಾಂತರಿಸಲಾಗಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ