Kannada NewsKarnataka News

ಬೆಳಗಾವಿ: ನೇಕಾರ ಸೇರಿ ಇಬ್ಬರ ಆತ್ಮಹತ್ಯೆ

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಸಾಲದ ಭಾದೆಯಿಂದ ನೇಕಾರರೊಬ್ಬರು ಆತ್ಮಹತ್ಯೆಗೆ ಶರಣಾದ ದಾರುಣ ಘಟನೆ ಬೆಳಗಾವಿಯ ವಡಗಾವಿಯ ದಾನೇಶ್ವರ ನಗರದಲ್ಲಿ ನಡೆದಿದೆ.
ದಾನೇಶ್ವರ ನಗರದ ಗಣೇಶ ಕುಶಪ್ಪ ತವರೆ (೩೭) ಆತ್ಮಹತ್ಯೆ ಮಾಡಿಕೊಂಡ ನೇಕಾರನಾಗಿದ್ದಾರೆ. ನೇಕಾರಿಕೆ ವೃತ್ತಿಯ ಸಲುವಾಗಿ ಸಾಲ ಮಾಡಿಕೊಂಡಿದ್ದರು. ಸಾಲ ತೀರಿಸಲು ಸಾಧ್ಯವಾಗದೇ ಜೀವನದಲ್ಲಿ ನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಗಣೇಶ ಅವರ ಪತ್ನಿ ಶಹಾಪುರ ಠಾಣೆಯಲ್ಲಿ ದೂರು ಸಲ್ಲಿಸಿದ್ದು ಪ್ರಕರಣ ದಾಖಲಾಗಿದೆ.

ಯುವಕ ಆತ್ಮಹತ್ಯೆ

Home add -Advt

ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡ ಘಟನೆ ತಾಲೂಕಿನ ಕಾಕತಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಮಂಥನ್ ಜಾಧವ (25 ) ತಮ್ಮ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಕಾಕತಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 

 

Related Articles

Back to top button