ಪ್ರಗತಿವಾಹಿನಿ ಸುದ್ದಿ, ರಾಯಚೂರು :
ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರ ಗ್ರಾಮ ವಾಸ್ತವ್ಯದ ವೇಳೆ ಭದ್ರತಾ ವೈಫಲ್ಯದ ಹಿನ್ನೆಲೆಯಲ್ಲಿ ಇಬ್ಬರು ಪೊಲೀಸ್ ಅಧಿಕಾರಿಗಳನ್ನು ಅಮಾನತು ಮಾಡಲಾಗಿದೆ.
ಕುಮಾರಸ್ವಾಮಿ ಚಲಿಸುತ್ತಿದ್ದ ಸರ್ಕಾರಿ ಬಸ್ ಅಡ್ಡಗಟ್ಟಿ ಪ್ರತಿಭಟನೆ ನಡೆಸಲಾಗಿತ್ತು. ರಾಯಚೂರಿನ ಸಿಪಿಐ ದತ್ತಾತ್ರೇಯ, ಪಿಎಸ್ಐ ನಿಂಗಪ್ಪ ಅವರನ್ನು ಅಮಾನತು ಮಾಡಿ ಶುಕ್ರವಾರ ಆದೇಶ ಹೊರಡಿಸಲಾಗಿದೆ. ಗ್ರಾಮ ವಾಸ್ತವ್ಯಕ್ಕಾಗಿ ಕುಮಾರಸ್ವಾಮಿ ಅವರು ರಾಯಚೂರಿನಿಂದ ಸರ್ಕಾರಿ ಬಸ್‌ನಲ್ಲಿ ಮಾನ್ವಿ ತಾಲೂಕಿನ ಕರೇಗುಡ್ಡ ಗ್ರಾಮಕ್ಕೆ ತೆರಳುತ್ತಿದ್ದರು. ಆಗ ವೈಟಿಪಿಎಸ್ ಕಾರ್ಮಿಕರ ಸಂಘದ ಸದಸ್ಯರು ಬಸ್ ಅಡ್ಡಗಟ್ಟಿ ಪ್ರತಿಭಟನೆ ನಡೆಸಿದ್ದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ