ಪ್ರಗತಿವಾಹಿನಿ ಸುದ್ದಿ: ಇಂದಿನಿಂದ ಕೆಎಸ್‌ಆರ್‌ಟಿಸಿಯ 20 ಹೊಸ ಅಂಬಾರಿ ಉತ್ಸವ ಸ್ಲೀಪರ್ ಬಸ್‌ಗಳು ರಸ್ತೆಗೆ ಇಳಿದಿವೆ. ಸಚಿವರಾದ ರಾಮಲಿಂಗರೆಡ್ಡಿ ಮತ್ತು ದಿನೇಶ್ ಗುಂಡೂರಾವ್ ಅವರು ಮೆಜೆಸ್ಟಿಕ್‌ನ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದ ಮುಂಭಾಗ ಈ ಬಸ್‌ಗಳಿಗೆ ಚಾಲನೆ ನೀಡಿದರು.
ಬಳಿಕ ಮಾತನಾಡಿದ ಸಚಿವ ರಾಮಲಿಂಗಾರೆಡ್ಡಿ ಎರಡು ತಿಂಗಳ ಹಿಂದೆಯಷ್ಟೇ 20 ವೋಲ್ವೋ ಬಸ್‌ಗಳಿಗೆ ಚಾಲನೆ ನೀಡಲಾಗಿತ್ತು. ಇಂದು ಅಂಬಾರಿ ಉತ್ಸವ ಸ್ಲೀಪರ್ ಬಸ್‌ಗಳಿಗೆ ಚಾಲನೆ ನೀಡಿದ್ದೇವೆ. ಬೆಂಗಳೂರಿನಿಂದ ವಿವಿಧ ಜಿಲ್ಲೆಗಳಿಗೆ ಹಾಗೂ ಅಂತಾರಾಜ್ಯಗಳಿಗೆ ಈ ಬಸ್‌ಗಳು ಸಂಚಾರ ಮಾಡುತ್ತವೆ ಎಂದು ಮಾಹಿತಿ ನೀಡಿದರು.
ಬಸ್ ವಿಶೇಷತೆ: ಅಂಬಾರಿ ಉತ್ಸವ ಸ್ಲೀಪರ್ ಬಸ್‌ಗಳು 15 ಮೀಟರ್ ಉದ್ದವಿದ್ದು, 40 ಬರ್ತ್ 2×1 ಸಂರಚನೆಯೊಂದಿಗೆ ಪ್ರಯಾಣಿಕರಿಗೆ ಅರಾಮದಾಯಕ ಪ್ರಯಾಣವನ್ನು ನೀಡುತ್ತವೆ. ಇದು ಶಕ್ತಿಯುತ ಹಾಲೋಜನ್ ಹೆಡ್‌ಲೈಟ್‌ಗಳು ಮತ್ತು ಬೆಳಗ್ಗಿನ ಸಮಯದಲ್ಲಿ ರನ್ನಿಂಗ್ ಲೈಟ್ ಗಳನ್ನು (DRL) ಹೊಂದಿವೆ.
ವಾಯುಗತಿ ಶಾಸ್ತ್ರದ ವಿನ್ಯಾಸವು ಉತ್ತಮ ಇಂಧನ ದಕ್ಷತೆಯನ್ನು ಒದಗಿಸುತ್ತದೆ. ನೂತನ ಆವಿಷ್ಕಾರದ ಎಂಜಿನ್ ತಂತ್ರಜ್ಞಾನವು ಶ್ರೇಷ್ಠ ಕಾರ್ಯಕ್ಷಮತೆಯನ್ನು ಮತ್ತು ಸುಧಾರಿತ ಇಂಧನ ದಕ್ಷತೆಯನ್ನು (KMPL) ಒದಗಿಸುತ್ತವೆ. ಬಸ್ ಮುಂಭಾಗದ ಗಾಜು 9.5% ಅಗಲವಾಗಿವೆ. ಯು.ಎಸ್.ಬಿ ಮತ್ತು C-ಟೈಪ್ ಮೊಬೈಲ್ ಚಾರ್ಜಿಂಗ್ ಪಾಯಿಂಟ್‌ಗಳ ಅಳವಡಿಸಲಾಗಿದೆ.
ಹೆಚ್ಚಿನ ಏರ್ ಕಂಡೀಷನಿಂಗ್ ವ್ಯವಸ್ಥೆ ಮಾಡಲಾಗಿದೆ. ಪ್ರಯಾಣಿಕರಿಗೆ ಪ್ರೀಮಿಯಂ ಅನುಭವ ಮತ್ತು ಉತ್ತಮ ಆಸನಗಳ ವ್ಯವಸ್ಥೆ ಮಾಡಲಾಗಿದೆ. ರಾತ್ರಿ ವೇಳೆ ಚಾಲನೆ ಮಾಡುವಾಗ ಸುರಕ್ಷತೆಗಾಗಿ ಹಿಂಬದಿ ಫಾಗ್ ಲೈಟ್ ಹಳ ಅಳವಡಿಸಲಾಗಿದೆ.
ಚಾಲಕರ ಅನುಕೂಲತೆಗಾಗಿ ಸುಲಭವಾಗಿ ಕೈಗೆಟುಕುವ ನಿಯಂತ್ರಕಗಳು ಮತ್ತು ಸ್ವಿಚ್‌ಗಳನ್ನು ಹೊಂದಿವೆ. ತುರ್ತು ಪರಿಸ್ಥಿತಿಗಳಲ್ಲಿ ಪ್ರಯಾಣಿಕರ ಸುರಕ್ಷತೆಗಾಗಿ ಫೈರ್ ಅಲಾರಮ್ ಮತ್ತು ಪ್ರೊಟೆಕ್ಷನ್ ಸಿಸ್ಟಮ್ ಅಳವಡಿಸಲಾಗಿದೆ. ಚಾಲಕರು, ಪ್ರಯಾಣಿಕರ ಬಾಗಿಲಿನಿಂದ ಪಾದಚಾರಿಗಳನ್ನು ಸುಲಭವಾಗಿ ನೋಡಬಹುದಾಗಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ