Latest

ಪ್ರಧಾನಿ ಮೋದಿಗೆ ಕ್ಲೀನ್ ಚಿಟ್ ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿ ವಜಾ

ಪ್ರಗತಿವಾಹಿನಿ ಸುದ್ದಿ; ನವದೆಹಲಿ: 2002ರ ಗುಜರಾತ್ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅಂದಿನ ಗುಜರಾತ್ ಸಿಎಂ ನರೇಂದ್ರ ಮೋದಿಯವರಿಗೆ ವಿಶೇಷ ತನಿಖಾ ತಂಡ ನೀಡಿದ್ದ ಕ್ಲೀನ್ ಚಿಟ್ ಪ್ರಶ್ನಿಸಿ ಜಾಕಿಯಾ ಜಫ್ರಿ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ.

ಪ್ರಕರಣದಲ್ಲಿ ಪ್ರಧಾನಿ ಮೋದಿಯವರಿಗೆ ಕ್ಲೀನ್ ಚಿಟ್ ಪ್ರಶ್ನಿಸಿ ಗಲಭೆಯಲ್ಲಿ ಸಾವನ್ನಪ್ಪಿದ್ದ ಕಾಂಗ್ರೆಸ್ ಮಾಜಿ ಸಂಸದ ಎಹ್ಸಾನ್ ಜಫ್ರಿ ಪತ್ನಿ ಜಾಕಿಯಾ ಜಫ್ರಿ ಸುಪ್ರೀಂ ಕೋರ್ಟ್ ನಲ್ಲಿ ಮೇಲ್ಮನವಿ ಅರ್ಜಿ ಸಲ್ಲಿಸಿದ್ದರು.

ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ಇದೀಗ ಮೇಲ್ಮನವಿ ಅರ್ಜಿ ವಜಾಗೊಳಿಸಿದ್ದು, ಗುಜರಾತ್ ಗಲಭೆ ಪ್ರಕರಣದಲ್ಲಿ ಪ್ರಧಾನಿ ನರೇಂದ್ರ ಮೋದಿಯವರಿಗೆ ನೀಡಲಾಗಿದ್ದ ಕ್ಲೀನ್ ಚಿಟ್ ಆದೇಶವನ್ನು ಎತ್ತಿ ಹಿಡಿದಿದೆ.
ಮೂರು ಪುಟ್ಟ ಮಕ್ಕಳನ್ನು ಬಾವಿಗೆ ತಳ್ಳಿ ಸಾಯಿಸಿದ ತಂದೆ

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button