Latest

ಒಂದೇ ಪ್ರಕರಣದಲ್ಲಿ 38 ಅಪರಾಧಿಗಳಿಗೆ ಮರಣದಂಡನೆ, 11 ಮಂದಿಗೆ ಜೀವಾವಧಿ ಶಿಕ್ಷೆ ವಿಧಿಸಿದ ಕೋರ್ಟ್

ಪ್ರಗತಿವಾಹಿನಿ ಸುದ್ದಿ; ಅಹಮದಾಬಾದ್: 2008ರಲ್ಲಿ ನಡೆದಿದ್ದ ಅಹಮದಾಬಾದ್ ಸರಣಿ ಬಾಂಬ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ 38 ಜನ ಅಪರಾಧಿಗಳಿಗೆ ಮರಣದಂಡನೆ ವಿಧಿಸಿ ಗುಜರಾತ್ ವಿಶೇಷ ನ್ಯಾಯಾಲಯ ತೀರ್ಪು ಪ್ರಕಟಿಸಿದೆ.

12 ವರ್ಷಗಳಿಗೂ ಹೆಚ್ಚು ಕಾಲ ಸುದೀರ್ಘ ವಿಚಾರಣೆ ಬಳಿಕ ಒಂದೇ ಪ್ರಕರಣದ 38 ಅಪರಾಧಿಗಳಿಗೆ ಇದೀಗ ಮರಣದಂಡನೆ ಶಿಕ್ಷೆ ವಿಧಿಸಲಾಗಿದೆ. 2008ರ ಸರಣಿ ಬಾಂಬ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ 77 ಜನರ ವಿರುದ್ಧ ದೋಷಾರೋಪ ಪಟ್ಟಿ ಸಲ್ಲಿಸಲಾಗಿತ್ತು. ಅವರಲ್ಲಿ 49 ಅಪರಾಧಿಗಳಿಗೆ ಶಿಕ್ಷೆ ಪ್ರಮಾಣ ಪ್ರಕಟಿಸಿರುವ ನ್ಯಾಯಾಲಯ, 38 ಅಪರಾಧಿಗಳಿಗೆ ಗಲ್ಲು, 11 ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಿ ಆದೇಶ ಹೊರಡಿಸಿದೆ.

2008ರಲ್ಲಿ ಅಹಮದಾಬಾದ್ ನಲ್ಲಿ ನಡೆದಿದ್ದ ಸರಣಿ ಬಾಂಬ್ ಸ್ಫೋಟದಲ್ಲಿ 56 ಜನರು ಸಾವನ್ನಪ್ಪಿದ್ದರು. ಪ್ರಕರಣದ ಬಗ್ಗೆ ಸುದೂರ್ಘ ವಿಚಾರಣೆ ಬಳಿಕ ಇದೀಗ ಗುಜರಾತ್ ವಿಶೇಷ ನ್ಯಾಯಾಲಯ 38 ಅಪರಾಧಿಗಳಿಗೆ ಮರಣದಂಡನೆ ವಿಧಿಸಿದೆ.

ಬೆಳಗಾವಿ ಪ್ಯಾರಾ ಮೆಡಿಕಲ್ ಕಾಲೇಜಿನಲ್ಲಿ ಮುಂದುವರೆದ ಹೈಡ್ರಾಮಾ

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button