ಪ್ರಗತಿವಾಹಿನಿ ಸುದ್ದಿ; ನವದೆಹಲಿ: ಮುಂಬರುವ 2022ರ ವಿಧಾನಸಭಾ ಚುನಾವಣೆಗೆ ಸಿದ್ಧತೆ ನಡೆಸಿರುವ ಬಿಜೆಪಿ ಚುನಾವಣಾ ಉಸ್ತುವಾರಿಗಳನ್ನು ನೇಮಕಮಾಡಿದೆ. ಅದರಂತೆ ಉತ್ತರಾಖಂಡ ಚುನಾವಣಾ ಉಸ್ತುವಾರಿ ಜವಾಬ್ದಾರಿಯನ್ನು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹೆಗಲಿಗೆ ವಹಿಸಲಾಗಿದೆ.
ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಶಿಯವರನ್ನು ಉತ್ತರಾಖಂಡದ ಚುನಾವಣಾ ಉಸ್ತುವಾರಿಯಾಗಿ ನೇಮಕ ಮಾಡಲಾಗಿದ್ದು, ಸಂಸದ ಲಾಕೆಟ್ ಚಟರ್ಜಿ ಮತ್ತು ಆರ್.ಪಿ.ಸಿಂಗ್ ಸಹ ಉಸ್ತುವಾರಿಗಳಾಗಿದ್ದಾರೆ.
ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರಿಗೆ ಉತ್ತರ ಪ್ರದೇಶ ಉಸ್ತುವಾರಿ ವಹಿಸಲಾಗಿದ್ದು, ಸಚಿವ ಅನುರಾಗ್ ಠಾಕೂರ್, ಅರ್ಜುನ್ ರಾಮ್ ಮೇಘ್ವಾಲ್, ಸಚಿವೆ ಶೋಭಾ ಕರಂದ್ಲಾಜೆ, ಅನ್ನಪೂರ್ಣಾದೇವಿ ಸಹ ಉಸ್ತುವಾರಿಗಳಾಗಿ ನೇಮಕಗೊಂಡಿದ್ದಾರೆ.
ಕೇಂದ್ರ ಕಾರ್ಮಿಕ ಮತ್ತು ಉದ್ಯೋಗ ಮತ್ತು ಪರಿಸರ ಸಚಿವ ಭೂಪೇಂದ್ರ ಯಾದವ್ ಅವರಿಗೆ ಮಣಿಪುರದ ಉಸ್ತುವಾರಿ ನೀಡಲಾಗಿದ್ದು, ಸಾಮಾಜಿಕ ನ್ಯಾಯ ಸಚಿವಾಲಯದ ರಾಜ್ಯ ಸಚಿವೆ ಪ್ರತಿಮಾ ಭೌಮಿಕ್, ಸಚಿವ ಅಶೋಕ್ ಸಿಂಘಾಲ್ ಸಹ ಉಸ್ತುವಾರಿಗಳಾಗಿದ್ದಾರೆ.
ಜಲಶಕ್ತಿ ಸಚಿವ ಗಜೇಂದ್ರ ಶೇಖಾವತ್ ಅವರಿಗೆ ಪಂಜಾಬ್ ಉಸ್ತುವಾರಿ ವಹಿಸಲಾಗಿದ್ದು, ಸಚಿವ ಹರ್ದಿಪ್ ಸಿಂಗ್ ಪುರಿ, ಸಚಿವೆ ಮೀನಾಕ್ಷಿ ಲೇಖಿ, ಸಚಿವ ವಿನೋದ್ ಚಾಯ್ಡಾ ಸಹ ಉಸ್ತುವಾರಿಗಳಾಗಿದ್ದಾರೆ. ಮಹಾರಾಷ್ಟ್ರ ಮಾಜಿ ಸಿಎಂ ದೇವೇಂದ್ರ ಫಡ್ನವಿಸ್ ಅವರಿಗೆ ಗೋವಾ ಉಸ್ತುವಾರಿ ನೀಡಲಾಗಿದೆ.
ಆಂಕರ್ ಅನುಶ್ರೀ ಡ್ರಗ್ಸ್ ಪ್ರಕರಣಕ್ಕೆ ಬಿಗ್ ಟ್ವಿಸ್ಟ್
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ