Latest

ನನ್ನ ಕೋಪ ಮತದಾರರ ಮೇಲಲ್ಲ; ಸೋಲಿಗೆ ಕಾರಣ ಬಹಿರಂಗ ಪಡಿಸಿದ ಸಿದ್ದರಾಮಯ್ಯ

ಪ್ರಗತಿವಾಹಿನಿ ಸುದ್ದಿ; ಮೈಸೂರು: ಚಾಮುಂಡೇಶ್ವರಿ ಕ್ಷೇತ್ರದಿಂದ ಮತ್ತೆ ಸ್ಪರ್ಧಿಸುವುದಿಲ್ಲ ಎಂದು ಅಧಿಕೃತವಾಗಿ ಘೋಷಣೆ ಮಾಡಿರುವ ವಿಪಕ್ಷ ನಾಯಕ ಸಿದ್ದರಾಮಯ್ಯ ಈ ಹಿಂದೆ ಕ್ಷೇತ್ರದಲ್ಲಿ ಅಮ್ಮ ಸೋಲಿಗೆ ಕಾರಣವೇನು ಎಂಬುದನ್ನು ಬಹಿರಂಗಪಡಿಸಿದ್ದಾರೆ.

ವಿಧಾನಸಭಾ ಚುನಾವಣೆಗೆ ಭರ್ಜರಿ ಸಿದ್ಧತೆ ಆರಂಭಿಸಿರುವ ವಿಪಕ್ಷ ನಾಯಕ ಸಿದ್ದರಾಮಯ್ಯ ಇಂದು ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಸಭೆ ನಡೆಸಿದರು. ಈ ವೇಳೆ 2023 ನನ್ನ ಕೊನೆ ಚುನಾವಣೆ. ಮತ್ತೆ ಚುನಾವಣೆಗೆ ಸ್ಪರ್ಧಿಸಲ್ಲ. ಚಾಮುಂದೇಶ್ವರಿ ಕ್ಷೇತ್ರದಿಂದ ನಾನು ಸ್ಪರ್ಧಿಸುವ ಪ್ರಶ್ನೆ ಇಲ್ಲ. ಬೇರೆ ಯಾರನ್ನೇ ನಿಲ್ಲಿಸಿದರೂ ಗೆಲ್ಲಿಸಬೇಕು ಎಂದರು.

Home add -Advt

ಇದೇ ವೇಳೆ ಈ ಹಿಂದೆ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ತಮ್ಮ ಸೋಲಿಗೆ ಕಾರಣವೇನು ಎಂಬುದನ್ನು ಹೇಳಿದ ಸಿದ್ದರಾಮಯ್ಯ, ನನಗೆ ಇಲ್ಲಿನ ಮತದಾರರ ಮೇಲೆ ಯಾವುದೇ ರೀತಿ ಕೋಪವಿಲ್ಲ. ನನ್ನ ಕೋಪ ಪಕ್ಷದ ಕಾರ್ಯಕರ್ತರ ವಿರುದ್ಧ. ಸೋಲಿಗೆ ಕಾರಣವಾಗಿದ್ದು, ಕಾರ್ಯಕರ್ತರು ಎಂದು ಆರೋಪಿಸಿದ್ದಾರೆ.

ಚಾಮುಂಡೇಶ್ವರಿಯಲ್ಲಿ 5 ಬಾರಿ ನನ್ನನ್ನು ಗೆಲ್ಲಿಸಿ, 3 ಬಾರಿ ಸೋಲಿಸಿದರು. ನಮ್ಮವರೇ ನನ್ನ ವಿರುದ್ಧ ಅಪಪ್ರಚಾರ ಮಾಡಿ ಸೋಲಿಸಿದರು. ಲಿಂಗಾಯಿತರನ್ನು ಒಡೆದವನು ನಾನು ಎಂದು ಆರೋಪಿಸಿದರು. ಮೇಲ್ವರ್ಗದವರ ವಿರೋಧಿ, ಸದಾಶಿವ ಆಯೋಗ ಜಾರಿ ಮಾಡಿಲ್ಲ ಎಂದು ಹೇಳಿದರು. ನನ್ನ ಬಗ್ಗೆ ಅಪಪ್ರಚಾರ ಮಾಡಿ ಪಿತೂರಿ ನಡೆಸಿ ಸೋಲಿಸಿದ್ದಾರೆ ಎಂದು ಹೇಳಿದ್ದಾರೆ.
2023 ನನ್ನ ಕಟ್ಟ ಕಡೆಯ ಚುನಾವಣೆ; ಸಿದ್ದರಾಮಯ್ಯ ಅಧಿಕೃತ ಘೋಷಣೆ

ಉಪರಾಷ್ಟ್ರಪತಿ ಚುನಾವಣೆ: ಯುಪಿಎ ಅಭ್ಯರ್ಥಿ ಘೋಷಣೆ

Related Articles

Back to top button