Cancer Hospital 2
Laxmi Tai Society2
Beereshwara add32

*2024- 25 ನೇ ಸಾಲಿನ ಆಯವ್ಯಯ ಪೂರ್ವಭಾವಿ ಚರ್ಚೆ*

Anvekar 3

ಪ್ರಗತಿವಾಹಿನಿ ಸುದ್ದಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ದಲಿತ ಸಂಘಟನೆಗಳ ಮುಖಂಡರೊಂದಿಗೆ 2024- 25 ನೇ ಸಾಲಿನ ಆಯವ್ಯಯ ಪೂರ್ವಭಾವಿ ಚರ್ಚೆ ನಡೆಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಮುಖ್ಯಮಂತ್ರಿಗಳು, ಕರ್ನಾಟಕದ ಲ್ಲಿ ಎಸ್.ಸಿ.ಎಸ್.ಪಿ/ ಟಿ. ಎಸ್.ಪಿ ಕಾಯ್ದೆಯನ್ನು ಜಾರಿಗೆ ತರಲಾಗಿದೆ. 2008 ರಿಂದ 2013 ರವರೆಗೆ 22,000 ಕೋಟಿ ರೂ.ಗಳು ವೆಚ್ಚವಾಗಿವೆ. 2013 ರಿಂದ 2018 ರವರೆ 88 ಸಾವಿರ ಕೋಟಿ ರೂ.ಗಳು ವೆಚ್ಚವಾಗಿದೆ .

ಹೆಚ್ಚು ದುರುಪಯೋಗವಾಗುತ್ತದೆ ಎಂಬ ಕಾರಣದಿಂದ 7 ಡಿ ಯನ್ನು ತೆಗೆದುಹಾಕಿ ಆದೇಶವನ್ನು ಹೊರಡಿಸಿದೆ. ಯಾವುದೇ ಆರ್ಥಿಕ ವರ್ಷದಲ್ಲಿ ಹಣ ಖರ್ಚಾಗದಿದ್ದರೆ ಮುಂದಿನ ವರ್ಷಕ್ಕೆ ಮುಂದುವರೆಯುತ್ತದೆ. ಅಧಿಕಾರಿಗಳ ನಿರ್ಲಕ್ಷ್ಯದಿಂದ ದುರುಪಯೋಗವಾದರೆ ಕ್ರಿಮಿನಲ್ ಮೊಕದ್ದಮೆ ಹೂಡಬಹುದು. ಜನಸಂಖ್ಯೆಗೆ ಅನುಗುಣವಾಗಿ ಹಣವನ್ನು ಖರ್ಚು ಮಾಡಬೇಕು ಎಂದು ಆಂಧ್ರಪ್ರದೇಶ ಹಾಗೂ ಕರ್ನಾಟಕದಲ್ಲಿ ಕಾಯ್ದೆ ತರಲಾಗಿದೆ. ಇದು ಇಡೀ ದೇಶದಲ್ಲಿ ಆಗಬೇಕು. ಕಾಂಗ್ರೆಸ್ ಪಕ್ಷದ ಪ್ರಣಾಳಿಕೆಯಲ್ಲಿ ಪ್ರಮುಖ ಯೋಜನೆಯಾಗಬೇಕೆಂದು ಸೂಚಿಸಿದೆ ಎಂದರು.

Emergency Service

ಬಡ್ತಿಯಲ್ಲಿ ಮೀಸಲಾತಿ ಕಾಯ್ದೆ ಮಾಡಿದ್ದು ಇಡೀ ದೇಶದಲ್ಲಿ ಕರ್ನಾಟಕ ಮಾತ್ರ. ಪಿ.ಟಿ. ಸಿ.ಎಲ್ ಕಾಯ್ದೆ ತಿದ್ದುಪಡಿ ಮಾಡಿದೆ. ಎಸ್.ಸಿ.ಎಸ್.ಟಿ ಜನಾಂಗದವರಿಗೆ ಗುತ್ತಿಗೆಯಲ್ಲಿ 1 ಕೋಟಿವರೆಗೆ ಮೀಸಲಾತಿ ನೀಡಲಾಗಿದೆ. ಆರ್ಥಿಕವಾಗಿ, ಸಾಮಾಜಿಕವಾಗಿ ಶಕ್ತಿ ತುಂಬಲು ಈ ಕ್ರಮಗಳನ್ನು ಕೈಗೊಂಡಿದೆ ಎಂದರು.

7 % ಪರಿಶಿಷ್ಟ ವರ್ಗದವರಿದ್ದಾರೆ, 17.15% ಪರಿಶಿಷ್ಟ ಜಾತಿಯವರಿದ್ದಾರೆ. 21.1 % ಜನಸಂಖ್ಯೆಗೆ ಅನುಗುಣವಾಗಿ ಅಭಿವೃದ್ಧಿ ಕೆಲಸದಲ್ಲಿ ಅನುದಾನ ನೀಡಿದೆ. ಬಿಜೆಪಿ ಸರ್ಕಾರದಲ್ಲಿ ಬಜೆಟ್ ಗಾತ್ರ ಹೆಚ್ಚಾದರೂ ಎಸ್.ಸಿ, ಎಸ್ ಪಿ / ಟಿಎಸ್ ಪಿ ಅನುದಾನ ಹೆಚ್ಚಾಗಿರಲಿಲ್ಲ. ಇದನ್ನು ಗುರುತಿಸಬೇಕು. ನಮ್ಮ ಸರ್ಕಾರ ಸಾಮಾಜಿಕ ಬದ್ಧತೆಯುಳ್ಳ ಸರ್ಕಾರ ಎಂದರು.

ಸಭೆಯಲ್ಲಿ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ನಾಗೇಂದ್ರ, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿಗಳಾದ ಗೋವಿಂದರಾಜು, ನಸೀರ್ ಅಹ್ಮದ್, ಮುಖ್ಯ ಮಂತ್ರಿಗಳ ಅಪರ ಮುಖ್ಯ ಕಾರ್ಯದರ್ಶಿ ಎಲ್.ಕೆ.ಅತೀಕ್, ರಾಜ್ಯ ಯೋಜನಾ ಆಯೋಗದ ಉಪಾಧ್ಯಕ್ಷ
ರಾಜೀವ್ ಗೌಡ ಹಾಗೂ ಅಧಿಕಾರಿಗಳು ಉಪಸ್ಥಿತರಿದ್ದರು.

Gokak Jyotishi add 8-2
Bottom Add3
Bottom Ad 2

You cannot copy content of this page