ಪ್ರಗತಿವಾಹಿನಿ ಸುದ್ದಿ; ನವದೆಹಲಿ: ಕೊರೊನಾ ವೈರಸ್ ತಡೆಗಟ್ಟುವ ನಿಟ್ಟಿನಲ್ಲಿ ಮುಂಜಾಗೃತಾ ಕ್ರಮವಾಗಿ 21 ದಿನಗಳ ಕಾಲ ಅಂದರೆ ಏ.14ರವರೆಗೆ ದೇಶಾದ್ಯಂತ ಲಾಕ್ ಡೌನ್ ಘೋಷಿಸಲಾಗಿದೆ. ಈ ನಡುವೆ ಏಪ್ರಿಲ್ 14ರ ನಂತರ ಲಾಕ್‍ಡೌನ್ ಮುಂದುವರಿಸುವ ಪ್ರಸ್ತಾವ ಸರ್ಕಾರದ ಮುಂದಿಲ್ಲ ಎಂದು ಕೇಂದ್ರ ಸಂಪುಟ ಕಾರ್ಯದರ್ಶಿ ರಾಜೀವ್ ಗೌಬಾ ಸ್ಪಷ್ಟನೆ ನೀಡಿದ್ದಾರೆ.
ಈ ಕುರಿತು ಮಾಹಿತಿ ನೀಡಿದ ರಾಜೀವ್ ಗೌಬಾ, ಏಪ್ರಿಲ್ 14ರ ನಂತರ ಲಾಕ್‍ಡೌನ್ ಮುಂದುವರಿಸುವ ಕುರಿತು ಯಾವುದೇ ಚರ್ಚೆಗಳು ನಡೆದಿಲ್ಲ. ಹಾಗೆಯೇ ಸರ್ಕಾರ ಮುಂದೆ ಈ ರೀತಿಯ ಯಾವ ಯೋಜನೆಗಳು ಇಲ್ಲ. ಮಾಧ್ಯಮಗಳಲ್ಲಿ ಹಾಗೂ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವ ಸುದ್ದಿ ಸಂಪೂರ್ಣ ಸುಳ್ಳು ಎಂದಿದ್ದಾರೆ.
ಲಾಕ್‍ಡೌನ್ ಅವಧಿ ಏಪ್ರಿಲ್ 14ರ ನಂತರವೂ ಮುಂದುವರಿಯಲಿದೆ ಎಂಬ ಸುದ್ದಿ ಸಾಮಾಜಿಕ ಜಾಲತಾಣಗಳಲ್ಲಿ ಹರಡುತ್ತಿದೆ. ಇದರಿಂದಾಗಿ ದೇಶದ ಜನತೆ ಇನ್ನಷ್ಟು ಆತಂಕಕ್ಕೆ ಒಳಗಾಗುತ್ತಿದ್ದಾರೆ. ಈ ಹಿನ್ನಲೆಯಲ್ಲಿ ಕೇಂದ್ರ ಸಾರ್ಕಾರ ಸುಳ್ಳು ಸುದ್ದಿಗಳಿಗೆ ತೆರೆ ಎಳೆದಿದ್ದು, ಏ.14 ರ ನಂತರ ಲಾಕ್ ಡೌನ್ ಪ್ರಸ್ತಾಪ ಸರ್ಕಾರದ ಮುಂದಿಲ್ಲ ಎಂದು ತಿಳಿಸಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ