Latest

*21 ಐಎಎಸ್ ಅಧಿಕಾರಿಗಳ ದಿಢೀರ್ ವರ್ಗಾವಣೆ ಮಾಡಿದ ಸರ್ಕಾರ*

ಪ್ರಗತಿವಾಹಿನಿ ಸುದ್ದಿ: ಮಹತ್ವದ ಬೆಳವಣಿಗೆಯೊಂದರಲ್ಲಿ ರಾಜ್ಯ ಸರ್ಕಾರ 21 ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ.

ಇತ್ತೀಚೆಗಷ್ಟೇ ರಾಜ್ಯ ಸರ್ಕಾರ 25 ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿತ್ತು. ಇದೀಗ 21 ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ.

ಮೈಸೂರು ಜಿಲ್ಲಾಧಿಕಾರಿ ಕೆ.ವಿ.ರಾಜೇಂದ್ರ ಅವರನ್ನು ಪ್ರವಾಸೋದ್ಯಮ ನಿರ್ದೇಶಕರಾಗಿ ಬೆಂಗಳೂರಿಗೆ ವರ್ಗಾವಣೆ ಮಾಡಲಾಗಿದೆ. ಮೈಸೂರು ಜಿಲ್ಲಾಧಿಕಾರಿಯಾಗಿ ಲಕ್ಷ್ಮೀಕಾಂತ್ ರೆಡ್ಡಿ ಅವರನ್ನು ನೇಮಕ ಮಾಡಲಾಗಿದೆ. ಲಕ್ಷ್ಮೀಕಾಂತ್ ರೆಡ್ಡಿ ಮೈಸೂರು ಪಾಲಿಕೆ ಆಯುಕ್ತರಾಗಿದ್ದರು.

ಒಟ್ಟು 21 ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಲಾಗಿದೆ.


ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button