Kannada NewsLatestNational
*ಕಲಬೆರಿಕೆ ಮದ್ಯ ಸೇವನೆ: 21 ಜನರು ದುರ್ಮರಣ*

ಪ್ರಗತಿವಾಹಿನಿ ಸುದ್ದಿ: ಕಲಬೆರಿಕೆ ಮದ್ಯ ಸೇವಿಸಿ 21 ಜನರು ಸಾವನ್ನಪ್ಪಿರುವ ಘಟನೆ ಪಂಜಾಬ್ ನ ಹಾಡಿ ಸಂಗ್ರೂರ್ ನಲ್ಲಿ ನಡೆದಿದೆ.
ಎಥೆನಾಲ್ ಇರುವ ಮದ್ಯ ಸೇವಿಸಿದ್ದರಿಂದ 40ಕ್ಕೂ ಹೆಚ್ಚು ಜನರು ಅಸ್ವಸ್ಥರಾಗಿ ಆಸ್ಪತ್ರೆಗೆ ದಾಖಲಾಗಿದ್ದರು. ಅವರಲ್ಲಿ 21 ಜನರು ಸಾವನ್ನಪ್ಪಿದ್ದಾರೆ. ಉಳಿದವರು ಜೀವನ್ಮರಣದ ನಡುವೆ ಹೋರಾಡುತ್ತಿದ್ದಾರೆ.
ಪ್ರಕರಣದ ತನಿಖೆಗಾಗಿ ಪಂಜಾಬ್ ಸರ್ಕಾರ ವಿಶೇಷ ಪೊಲೀಸ್ ತಂಡ ರಚನೆ ಮಾಡಿದೆ. ಈ ವರೆ 6 ಆರೋಪಿಗಳನ್ನು ಬಂಧಿಸಲಾಗಿದೆ.



