Belagavi NewsBelgaum News

*ಬೆಳಗಾವಿ: ಕಲುಷಿತ ನೀರು ಸೇವಿಸಿ ಮಹಿಳೆ ಬಲಿ*

ಪ್ರಗತಿವಾಹಿನಿ ಸುದ್ದಿ: ಕಲುಷಿತ ನೀರು ಸೇವಿಸಿ ತೀವ್ರ ಅಸ್ವಸ್ಥಗೊಂಡಿದ್ದ ಮಹಿಳೆ ಸಾವನ್ನಪ್ಪಿರುವ ಘಟನೆ ಬೆಳಗಾವಿ ಜಿಲ್ಲೆಯ ಗೋಕಾಕ್ ತಾಲೂಕಿನ ಕನಸಗೇರಿ ಗ್ರಾಮದಲ್ಲಿ ನಡೆದಿದೆ.

Home add -Advt

38 ವರ್ಷದ ಹೊಳೆವ್ವ ಮೃತ ಮಹಿಳೆ. ಕಲುಷಿತ ನೀರು ಸೇವಿಸಿ ಅಸ್ವಸ್ಥಗೊಂಡಿದ್ದ ಮಹಿಳೆಯನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ. ಕನಸಗೇರಿ ಗ್ರಾಮದಲ್ಲಿ ಬಾವಿ ನೀರು ಸೇವಿಸಿ 10 ಜನರು ಅಸ್ವಸ್ಥರಾಗಿದ್ದರು. ಅವರಲ್ಲಿ ಓರ್ವ ಮಹಿಳೆ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.

ರಾಜ್ಯದ ಹಲವು ಜಿಲ್ಲೆಗಳಲ್ಲಿ ಒಂದೆಡೆ ಡೆಂಗ್ಯೂ ಪ್ರಕರಣ ಹೆಚ್ಚುತ್ತಿದ್ದರೆ ಮತ್ತೊಂದೆಡೆ ಕಲುಷಿತ ನೀರು ಸೇವಿಸಿ ಅಸ್ವಸ್ಥರಾಗುತ್ತಿರುವ ಪ್ರಕರಣ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಹಲವರು ಸಾವನ್ನಪ್ಪುತ್ತಿದ್ದಾರೆ. ಆದಾಗ್ಯೂ ಆರೋಗ್ಯ ಇಲಾಖೆ ಅಧಿಕಾರಿಗಳು, ಸಂಬಂಧ ಪಟ್ಟ ಅಧಿಕಾರಿಗಳು ಎಚ್ಚೆತ್ತುಕೊಂಡಂತೆ ಕಾಣುತ್ತಿಲ್ಲ.

Related Articles

Back to top button