EducationKarnataka NewsLatest

*222 ಪದವಿ ಕಾಲೇಜುಗಳಿಗೆ ಪ್ರಾಂಶುಪಾಲರ ನೇಮಕ*

ಪ್ರಗತಿವಾಹಿನಿ ಸುದ್ದಿ: ರಾಜ್ಯದ 222 ಪದವಿ ಕಾಲೇಜುಗಳಿಗೆ ಪ್ರಾಂಶುಪಾಲರ ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಉನ್ನತ ಶಿಕ್ಷಣ ಇಲಾಖೆಯು ಹಲವು ವರ್ಷಗಳ ಬಳಿಕ ಪದವಿ ಕಾಲೇಜುಗಳಿಗೆ ಪ್ರಾಂಶುಪಾಲರ ನೇಮಕ ಮಾಡಿದೆ. 310 ಪ್ರಾಂಶುಪಾಲರ ಹುದ್ದೆಗಳಿಗೆ ನೇಮಕಾತಿ ಅಧಿಸೂಚನೆ ಹೊರಡಿಸಲಾಗಿತ್ತು. ಅದರಲ್ಲಿ ಪ್ರಥಮ ಹಂತದಲ್ಲಿ, ದಾಖಲಾತಿಗಳ ಪರಿಶೀಲನೆ ಪೂರ್ಣಗೊಳಿಸಿರುವ 222 ಪ್ರಾಂಶುಪಾಲರನ್ನು ನೇಮಿಸಿದೆ.

ಉಳಿದ ಅಭ್ಯರ್ಥಿಗಳ ದಾಖಲಾತಿ ಪರಿಶೀಲನೆ ನಡೆಯುತ್ತಿದ್ದು, ಶೀಘ್ರದಲ್ಲಿಯೇ ನೇಮಕಾತಿ ಆಗಲಿದೆ ಎಂದು ಉನ್ನತ ‌ಶಿಕ್ಷಣ ಸಚಿವ ಬಸವರಾಜ್ ರಾಯರೆಡ್ಡಿ ಮಾಹಿತಿ ನೀಡಿದ್ದಾರೆ.


Related Articles

Back to top button