Kannada NewsLatestUncategorized

*ವಿ.ಟಿ.ಯು 22ನೇ ಘಟಿಕೋತ್ಸವಕ್ಕೆ ಕ್ಷಣಗಣನೆ*

ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ 22 ನೇ ಘಟಿಕೋತ್ಸವ ಶುಕ್ರವಾರ (ಫೆ.24) ಬೆಳಿಗ್ಗೆ 11;40 ಗಂಟೆಗೆ ವಿಟಿಯು ಜ್ಞಾನ ಸಂಗಮ ಆವರಣದ ಡಾ.ಎ.ಪಿ.ಜೆ ಅಬ್ದುಲ್ ಕಲಾಂ ಸಭಾಂಗಣದಲ್ಲಿ ನಡೆಯಲಿದೆ.

ಘಟಿಕೋತ್ಸವದಲ್ಲಿ ಗೌರವಾನ್ವಿತ ರಾಜ್ಯಪಾಲರು, ವಿಶ್ವವಿದ್ಯಾಲಯಗಳ ಕುಲಾಧಿಪತಿಗಳಾದ ಥಾವರಚಂದ್ ಗೆಹ್ಲೋಟ್ ಅವರು ಅಧ್ಯಕ್ಷತೆ ವಹಿಸಲಿದ್ದಾರೆ.

ನವದೆಹಲಿಯ ಅಖಿಲ ಭಾರತ ತಾಂತ್ರಿಕ ಶಿಕ್ಷಣ ಪರಿಷತ್ (ಎಐಸಿಟಿಇ) ಅಧ್ಯಕ್ಷರಾದ ಪ್ರೊ. ಟಿ.ಜಿ ಸೀತಾರಾಮ್ ಅವರು ಘಟಿಕೋತ್ಸವದ ಭಾಷಣ ಮಾಡಲಿದ್ದಾರೆ.

ಉನ್ನತ ಶಿಕ್ಷಣ ಇಲಾಖೆ, ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಇಲಾಖೆ, ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ ಸಚಿವರಾದ ಡಾ.ಸಿ.ಎನ್.ಅಶ್ವತ್ ನಾರಾಯಣ್ ಅವರು ಉಪಸ್ಥಿತರಿರಲಿದ್ದಾರೆ.

Home add -Advt

7ನೇ ವೇತನ ಆಯೋಗದ ಮಧ್ಯಂತರ ವರದಿ ಜಾರಿಗೆ ಕ್ರಮ – ಸಿಎಂ ಘೋಷಣೆ

https://pragati.taskdun.com/action-to-implement-interim-report-of-7th-pay-commission-announcement-by-cm/

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button