ಪ್ರಗತಿವಾಹಿನಿ ಸುದ್ದಿ; ಮಂಗಳೂರು: ಹಗಲು ಹೊತ್ತಲ್ಲೇ ಮನೆಗೆ ನುಗ್ಗಿದ ದುಷ್ಕರ್ಮಿಯೊಬ್ಬ 23 ವರ್ಷದ ಯುವತಿಯನ್ನು ಬರ್ಬರವಾಗಿ ಹತ್ಯೆಗೈದು ಪರಾರಿಯಾಗಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಮಂಡೂರಿನಲ್ಲಿ ನಡೆದಿದೆ.
23 ವರ್ಷದ ಜಯಶ್ರೀ ಕೊಲೆಯಾದ ಯುವತಿ. ಕಂಪ ಪ್ರದೇಶದ ಮನೆಯಲ್ಲಿ ಈ ದುರಂತ ಸಂಭವಿಸಿದೆ. ಮನೆಯಲ್ಲಿ ಯಾರೂ ಇಲ್ಲದ ವೇಳೆ ಹಾಡಹಗಲೇ ಮನೆಗೆ ನುಗ್ಗಿರುವ ಆರೋಪಿ, ಜಯಶ್ರೀಯನ್ನು ಚಾಕುವಿನಿಂದ ಇರಿದು ಕೊಂದಿದ್ದಾನೆ. ಬಳಿಕ ಸ್ಥಳದಿಂದ ಎಸ್ಕೇಪ್ ಆಗಿದ್ದಾನೆ.
ಸಂಪ್ಯಾ ಗ್ರಾಮಾಂತರ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.
*ಸ್ಯಾಂಟ್ರೋ ರವಿ ವಿರುದ್ಧ ಮತ್ತೊಂದು ಕೇಸ್ ದಾಖಲು*
https://pragati.taskdun.com/santro-ravione-more-case-filemysore/
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ