Cancer Hospital 2
Beereshwara 36
LaxmiTai 5

ಬೆಳಗಾವಿ ವಿಮಾನ ನಿಲ್ದಾಣ ನವೀಕರಣಕ್ಕಾಗಿ 230 ಕೋಟಿ ರೂ: ಈರಣ್ಣ ಕಡಾಡಿ

Anvekar 3

ಪ್ರಗತಿವಾಹಿನಿ ಸುದ್ದಿ, ಮೂಡಲಗಿ: ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರವು ಬೆಳಗಾವಿ ವಿಮಾನ ನಿಲ್ದಾಣದ ನವೀಕರಣಕ್ಕಾಗಿ ರೂ.230 ಕೋಟಿ ರೂಪಾಯಿಗಳ ಯೋಜನಾ ವರದಿ ತಯಾರಿಸಲು ಆಡಳಿತಾತ್ಮಕ ಅನುಮೋದನೆ ನೀಡಿ ಟೆಂಡರ್ ಪ್ರಕ್ರಿಯೆ ಜಾರಿಗೊಳಿಸಿದೆ ಎಂದು ರಾಜ್ಯಸಭಾ ಸಂಸದ ಈರಣ್ಣ ಕಡಾಡಿ ತಿಳಿಸಿದ್ದಾರೆ.
ಪತ್ರಿಕಾ ಹೇಳಿಕೆ ನೀಡಿರುವ ಅವರು, ಪ್ರಯಾಣಿಕರ ಟರ್ಮಿನಲ್ ಕಟ್ಟಡದ ವಿಸ್ತರಣೆ, ಮೂರು ಏರೋಬ್ರಿಡ್ಜ್‌ಗಳು ಹಾಗೂ ಏರೋಕ್ರಾಪ್ಟ್ ನಿಲ್ದಾಣ, ವಾಹನ ಪಾರ್ಕಿಂಗ್ ಹೀಗೆ ಎಲ್ಲಾ ಆಧುನಿಕ ಸೌಲಭ್ಯಗಳನ್ನು ಒಳಗೊಂಡಿದೆ. 36 ತಿಂಗಳಲ್ಲಿ ಈ ಕಾಮಗಾರಿಯನ್ನು ಪೂರ್ಣಗೊಳಿಸಲು ತಿಳಿಸಲಾಗಿದೆ ಎಂದಿದ್ದಾರೆ.
ಬೆಳಗಾವಿ ವಿಮಾನ ನಿಲ್ದಾಣ ವಿಸ್ತರಣೆ ನಿರ್ಣಯ ಕೈಗೊಂಡ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಿಗೆ ಹಾಗೂ ಕೇಂದ್ರ ವಿಮಾನಯಾನ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ ಅವರಿಗೆ ಜಿಲ್ಲೆಯ ಜನತೆಯ ಪರವಾಗಿ ಅನಂತ ಧನ್ಯವಾದಗಳನ್ನು ತಿಳಿಸುತ್ತೇನೆ ಎಂದಿದ್ದಾರೆ.

Emergency Service
Bottom Add3
Bottom Ad 2