
https://youtu.be/81B-FKD9DdE
ಪ್ರಗತಿವಾಹಿನಿ ಸುದ್ದಿ, ಕಾರವಾರ :
ಉತ್ತರ ಕನ್ನಡ ಜಿಲ್ಲೆಯ ಜಿಲ್ಲಾಧಿಕಾರಿ ವಾರ್ತಾ ಸ್ಪಂದನ ಕಾರ್ಯಕ್ರಮಕ್ಕೆ ಆಗಮಿಸಿದ ವೇಳೆ ಲೋ ಬಿಪಿಯಿಂದ ಪ್ರಜ್ಞೆ ತಪ್ಪಿದ ಘಟನೆ ಕಾರವಾರ ನಗರದ ವಾರ್ತಾ ಇಲಾಖೆಯಲ್ಲಿ ನಡೆದಿದೆ.
ವಾರ್ತಾ ಇಲಾಖೆ ಆಯೋಜಿಸಿದ್ದ ವಾರ್ತಾ ಸ್ಪಂಧನ ಕಾರ್ಯಕ್ರಮದ ಆರೋಗ್ಯ ಇಲಾಖೆ ವೈದ್ಯರ ಜೊತೆ ಹಮ್ಮಿಕೊಂಡಿದ್ದ ಫೋನ್ ಇನ್ ಕಾರ್ಯಕ್ರಮದಲ್ಲಿ
ಜಿಲ್ಲಾಧಿಕಾರಿ ಡಾ ಹರೀಶ್ ಕುಮಾರ್ ಭಾಗವಹಿಸಿದ್ದರು. ಈ ವೇಳೆ ಕಾರ್ಯಕ್ರಮದಲ್ಲಿ ಕುಳಿತಾಗಲೇ ಪ್ರಜ್ಞೆ ತಪ್ಪಿ ಬಿದ್ದಿದ್ದು ತಕ್ಷಣ ಸ್ಥಳದಲ್ಲಿದ್ದ ವೈದ್ಯರಿಂದ ಚಿಕಿತ್ಸೆ ಪಡೆದರು. ಬಳಿಕ ಕೆಲ ಸಮಯದ ಸುಧಾರಿಸಿಕೊಂಡು ಮತ್ತೆ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದಾರೆ.



