Kannada NewsKarnataka NewsLatestPolitics

*ಬಜೆಟ್ ಅಧಿವೇಶನಕ್ಕೆ ಕೇಸರಿ ಶಾಲು ಧರಿಸಿ ಬಂದ ಬಿಜೆಪಿ ಶಾಸಕರು*

ಪ್ರಗತಿವಾಹಿನಿ ಸುದ್ದಿ: ಇಂದಿನಿಂದ ವಿಧಾನಮಂಡಲ ಬಜೆಟ್ ಅಧಿವೇಶನ ಆರಂಭವಾಗಿದ್ದು, ಅಧಿವೇಶನಕ್ಕೆ ಬಿಜೆಪಿ ಶಾಸಕರು ಕೇಸರಿ ಶಾಲು ಧರಿಸಿ ಬಂದ ಘಟನೆ ನಡೆದಿದೆ.

ಇಂದಿನಿಂದ ಹತ್ತು ದಿನಗಳ ಕಾಲ ಬಜೆಟ್ ಅಧಿವೇಶನ ನಡೆಯಲಿದ್ದು, ಮೊದಲ ದಿನವಾದ ಇಂದು ಜಂಟಿ ಸದನ ಉದ್ದೇಶಿಸಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಭಾಷಣ ಮಾಡಿದ್ದಾರೆ. ಅಧಿವೇಶನದ ಮೊದಲ ದಿನ ಬಿಜೆಪಿ ಶಾಸಕರು ಸದನಕ್ಕೆ ಕೇಸರಿ ಶಾಲು ಧರಿಸಿ ಆಗಮಿಸಿದ್ದಾರೆ.

ರಾಜ್ಯಪಾಲರ ಭಾಷಣ ಮುಗಿಯುತ್ತಿದ್ದಂತೆಯೇ ವಿಧಾನಸಭೆಯಲ್ಲಿ ಬಿಜೆಪಿ ಶಾಸಕರು ಜೈಶ್ರೀರಾಮ್ ಘೋಷಣೆ ಕೂಗಿದ್ದಾರೆ. ಸದನದಲ್ಲಿ ಜೈಶ್ರೀರಾಮ್ ಘೋಷಣೆ ಮೊಳಗುತ್ತಿದ್ದಂತೆ ಕಾಂಗ್ರೆಸ್ ಶಾಸಕ ಸಂತೋಷ್ ಲಾಡ್ ಜೈ ಭೀಮ್ ಘೋಷಣೆ ಕೂಗಿದರು.

Home add -Advt

Related Articles

Back to top button