Kannada NewsKarnataka NewsLatest

*24 ಕೈದಿಗಳಿಗೆ ಅವಧಿಪೂರ್ವ ಬಿಡುಗಡೆ ಭಾಗ್ಯ*

ಪ್ರಗತಿವಾಹಿನಿ ಸುದ್ದಿ: ಸನ್ನಡತೆ ಆಧಾರದ ಮೇಲೆ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹ ಸೇರಿದಂತೆ ರಾಜ್ಯದ ವಿವಿಧ ಕಾರಾಗೃಹಗಳಲ್ಲಿರುವ 24 ಕೈದಿಗಳನ್ನು ಬಿಡುಗಡೆ ಮಾಡಲಾಗಿದೆ.

ಬಿಡುಗಡೆ ಕಾರ್ಯಕ್ರಮದಲ್ಲಿ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಭಾಗಿಯಾಗಿದ್ದು, ಕೈದಿಗಳಿಗೆ ಬಿಡುಗಡೆಯ ಆದೇಶ ಪತ್ರಗಳನ್ನು ವಿತರಿಸಿದರು. ಕಾರಾಗೃಹ ಎಡಿಜಿಪಿ ಅಲೋಕ್ ಕುಮಾರ್, ಜೈಲ್ ಚೀಫ್ ಸೂಪರ್‌ಡೆಂಟ್ ಅಂಶು ಕುಮಾರ್ ಸೇರಿದಂತೆ ಕಾರಾಗೃಹ ಇಲಾಖಾ ಅಧಿಕಾರಿ ವರ್ಗ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು.

ಸನ್ನಡತೆ ಆಧಾರದ ಮೇಲೆ ಅವಧಿ ಪೂರ್ವ ಬಿಡುಗಡೆಗೆ ರಾಜ್ಯಪಾಲರು ಆದೇಶಿಸಿದ್ದಾರೆ. ಇದರಿಂದ ಜೀವಾವಧಿ ಸಜಾ ಬಂಧಿಗಳಿಗೆ ಬಿಡುಗಡೆ ಭಾಗ್ಯ ದೊರೆತಿದೆ. ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದ 24 ಕೈದಿಗಳು ಬಿಡುಗಡೆಗೊಂಡಿದ್ದಾರೆ.

ಅಪರಾಧ ಕೃತ್ಯ ಎಸಗಿ ಜೈಲು ಸೇರಿದ್ದ ಕೈದಿಗಳು ಮನಪರಿವರ್ತನೆ ಆಗಿ ಒಳ್ಳೆಯ ಮನಷ್ಯರಾಗಿ ಬದಲಾದ ಹಿನ್ನೆಲೆ ಸನ್ನಡತೆ ಆಧಾರದ ಮೇಲೆ ಅವಧಿ ಪೂರ್ವ ಬಿಡುಗಡೆಗೊಂಡಿದ್ದಾರೆ.

Related Articles

Back to top button