ಪ್ರಗತಿವಾಹಿನಿ ಸುದ್ದಿ; ಭಾರತದ ರಾಜಸ್ಥಾನದಲ್ಲಿರುವ ರಣಥಂಬೋರ್ ರಾಷ್ಟ್ರೀಯ ಉದ್ಯಾನವನವು ಅನೇಕ ಬಂಗಾಳ ಹುಲಿಗಳಿಗೆ ನೆಲೆಯಾಗಿದೆ ಮತ್ತು ಇದು ಜನಪ್ರಿಯ ಪ್ರವಾಸಿ ಸ್ಥಳಗಳಲ್ಲಿ ಒಂದಾಗಿದೆ. ಆದರೆ ಈ ಉದ್ಯಾನವನದಲ್ಲಿದ್ದ 75 ಹುಲಿಗಳ ಪೈಕಿ 25 ಹುಲಿಗಳು ನಾಪತ್ತೆಯಾಗಿವೆ ಎಂಬ ವರದಿಯಾಗಿದೆ.
ಕಳೆದ ವರ್ಷ ರಣಥಂಬೋರ್ ರಾಷ್ಟ್ರೀಯ ಉದ್ಯಾನವನದಲ್ಲಿರುವ 75 ಹುಲಿಗಳ ಪೈಕಿ 25 ಹುಲಿಗಳು ನಾಪತ್ತೆಯಾಗಿವೆ ಎಂದು ರಾಜಸ್ಥಾನದ ಮುಖ್ಯ ವನ್ಯಜೀವಿ ವಾರ್ಡನ್ ಪವನ್ ಕುಮಾರ್ ಉಪಾಧ್ಯಾಯ ರಾಷ್ಟ್ರೀಯ ಉದ್ಯಾನವನದ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ.
ನಾಪತ್ತೆಯಾದವರ ತನಿಖೆಗಾಗಿ ವನ್ಯಜೀವಿ ಇಲಾಖೆ ತ್ರಿಸದಸ್ಯ ಸಮಿತಿಯನ್ನು ರಚಿಸಲಾಗಿದೆ. ಸದ್ಯ 25 ಹುಲಿಗಳು ನಾಪತ್ತೆಯಾಗಿರುವ ಬಗ್ಗೆ ರಾಜಸ್ಥಾನ ಸರ್ಕಾರ ಗಂಭೀರವಾಗಿ ಪರಿಗಣಿಸಿದ್ದು, ಆದಷ್ಟು ಬೇಗ ವರದಿ ನೀಡುವಂತೆ ತ್ರಿಸದಸ್ಯ ಸಮಿತಿಗೆ ಆದೇಶಿಸಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ