Karnataka NewsLatest

*ಬೀದರ್ ನಿಂದ ಚಾಮರಾಜನಗರದವರೆಗೆ 2,500 ಕಿ.ಮೀ ಉದ್ದದ ಮಾನವ ಸರಪಳಿ ರಚನೆ*

ಚಾರಿತ್ರಿಕ ಮಾನವ ಸರಪಳಿ ಚಳವಳಿ ಉದ್ಘಾಟಿಸಿದ ಸಿಎಂ ಸಿದ್ದರಾಮಯ್ಯ

ಪ್ರಗತಿವಾಹಿನಿ ಸುದ್ದಿ: ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನದ ಅಂಗವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಚಾರಿತ್ರಿಕ ಮಾನವ ಸರಪಳಿ ಚಳವಳಿಯನ್ನು ವಿಧಾನಸೌಧದ ಗ್ರಾಂಡ್ ಸ್ಟೆಪ್ಸ್ ನಲ್ಲಿ ಉದ್ಘಾಟಿಸಿದರು.

ಪ್ರಜಾಪ್ರಭುತ್ವ ದಿನದ ರಾಯಭಾರಿ ಹರೇಕಳ ಹಾಜಪ್ಪ, ಪೌರ ಕಾರ್ಮಿಕ ತಾಯಂದಿರಾದ ನಾಗಲಕ್ಷ್ಮಿ, ಮಂಜುಳ ಹಾಗೂ ತೃತೀಯ ಲಿಂಗಿ ಪ್ರಿಯಾಂಕ ಮತ್ತು ಇಬ್ಬರು ವಿಶೇಷ ಚೇತನ ವಿದ್ಯಾರ್ಥಿಗಳು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಎಡ-ಬಲದಲ್ಲಿ ನಿಂತು ಪ್ರಜಾಪ್ರಭುತ್ವ ದಿನವನ್ನು ಅರ್ಥಪೂರ್ಣಗೊಳಿಸಿದರು.

ಸಭಾಪತಿ ಬಸವರಾಜ ಹೊರಟ್ಟಿ, ಉಪಸಭಾಪತಿ ರುದ್ರಪ್ಪ ಲಮಾಣಿ, ಸಚಿವರುಗಳಾದ ಹೆಚ್.ಸಿ.ಮಹದೇವಪ್ಪ, ಪ್ರಿಯಾಂಕ್ ಖರ್ಗೆ, ಕೆ.ಜೆ.ಜಾರ್ಜ್, ದಿನೇಶ್ ಗುಂಡೂರಾವ್, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ನಸೀರ್ ಅಹಮದ್, ವಿಧಾನ ಪರಿಷತ್ ಸದಸ್ಯರಾದ ಸಲೀಂ ಅಹಮದ್, ಯು.ಬಿ.ವೆಂಕಟೇಶ್ ಸೇರಿ ಹಲವು ಪ್ರಮುಖರು ಉಪಸ್ಥಿತರಿದ್ದರು.

ವಿಶ್ವ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ಇಂದು ಬೀದರ್‌ನ ಬಸವ ಕಲ್ಯಾಣದ ಅನುಭವ ಮಂಟಪದಿಂದ ಚಾಮರಾಜನಗರದವರೆಗೂ 2,500ಕಿ.ಮೀ ಉದ್ದದ ಮಾನವ ಸರಪಳಿ ರಚಿಸಆಯಿತು. ಈ ಮಾನವ ಸರಪಳಿ ನಿರ್ಮಾಣ ಕಾರ್ಯಕ್ರಮದಲ್ಲಿ 25 ಲಕ್ಷ ಜನರು ಭಾಗವಹಿಸಿದ್ದರು.

ಮಾನವ ಸರಪಳಿ ನಿರ್ಮಾಣವು ವಿನೂತನ ಪ್ರಯೋಗವಾಗಿದ್ದು, ಜಾತಿ, ಧರ್ಮ, ವರ್ಗಗಳ ಭೇದವಿಲ್ಲದೆ ಎಲ್ಲ ಜನರೂ ಒಟ್ಟಾಗಿ 2,500 ಕಿ.ಮೀ ಉದ್ದದವರೆಗೂ ಕೈಕೈ ಹಿಡಿದು ನಿಂತಿದ್ದರು. ಇದು ವಿಶ್ವದಾಖಲೆಯ ಪ್ರಯತ್ನವಾಗಿದೆ ಎಂದು ರಾಜ್ಯ ಸರ್ಕಾರ ತಿಳಿಸಿದೆ.


ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button