ಪ್ರಗತಿವಾಹಿನಿ ಸುದ್ದಿ, ಬೆಳಗಾವಿ:
103 ವರ್ಷಗಳ ಇತಿಹಾಸ ಹೊಂದಿರುವ ಕೆಎಲ್‌ಇ ಸಂಸ್ಥೆಯು ಶನಿವಾರ ತನ್ನ 267ನೇ ಅಂಗಸಂಸ್ಥೆಗೆ ಬೆಂಗಳೂರಿನಲ್ಲಿ ಚಾಲನೆ ನೀಡುತ್ತಿದೆ.
ಸಾಯಂಕಾಲ 5 ಗಂಟೆಗೆ ಬೆಂಗಳೂರಿನ ರಾಜಾಜಿನಗರದಲ್ಲಿ ನೂತನವಾಗಿ ಪ್ರಾರಂಭಗೊಂಡಿರುವ ಕೆಎಲ್‌ಇ ಸಂಸ್ಥೆಯ ’ಕೆಎಲ್‌ಇ ದಿ ಬ್ಯಾನಿಯನ್ ಶಾಲೆಯ’ನ್ನು ಶಾಸಕರು ಹಾಗೂ ಮಾಜಿ ಸಚಿವರಾದ ಎಸ್. ಸುರೇಶ ಕುಮಾರ ಅವರು ಉದ್ಘಾಟನೆ ಮಾಡಲಿದ್ದಾರೆ.
ಸಮಾರಂಭದ ಮುಖ್ಯ ಅತಿಥಿಗಳಾಗಿ ಬೆಂಗಳೂರು ಮಹಾನಗರ ಪಾಲಿಕೆ ಮಹಾಪೌರರಾದ ಗಂಗಾಬಿಕೆ ಮಲ್ಲಿಕಾರ್ಜುನ ಆಗಮಿಸಲಿದ್ದಾರೆ.
ಮಾಜಿ ಸಚಿವರು ಹಾಗೂ ಶಾಸಕರಾದ ವಿ.ಸೋಮಣ್ಣ, ಬೆಂಗಳೂರು ಸೆಂಟ್ರಲ್ ಸಂಸದರಾದ ಪಿ.ಸಿ.ಮೋಹನ, ಬಿಬಿಎಂಪಿ ಕಾರ್ಪೋರೆಟರ್ ಆದ ಜಿ.ಕೃಷ್ಣಮೂರ್ತಿ ಗೌರವ ಅತಿಥಿಗಳಾಗಿ ಆಗಮಿಸಲಿದ್ದಾರೆ.
ಸಮಾರಂಭದ ಅಧ್ಯಕ್ಷತೆಯನ್ನು ಕೆಎಲ್‌ಇ ಸಂಸ್ಥೆಯ ಅಧ್ಯಕ್ಷರಾದ ಶಿವಾನಂದ ಕೌಜಲಗಿ ವಹಿಸಲಿದ್ದು, ಕೆಎಲ್‌ಇ ಸಂಸ್ಥೆಯ ಕಾರ್ಯಾಧ್ಯಕ್ಷರು ಹಾಗೂ ರಾಜ್ಯಸಭಾ ಸದಸ್ಯ ಡಾ.ಪ್ರಭಾಕರ ಕೋರೆ ಪ್ರಾಸ್ತಾವಿಕವಾಗಿ ಮಾತನಾಡಲಿದ್ದಾರೆ. ಕೆಎಲ್‌ಇ ಸಂಸ್ಥೆಯ ಎಲ್ಲ ಪದಾಧಿಕಾರಿಗಳು ಗಣ್ಯರು ಸಮಾರಂಭದಲ್ಲಿ ಉಪಸ್ಥಿತರುವರೆಂದು ಕಾರ್ಯದರ್ಶಿ ಡಾ.ಬಿ.ಜಿ.ದೇಸಾಯಿ ತಿಳಿಸಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ