Kannada NewsKarnataka NewsLatest
ಬೆಳಗಾವಿ: 11 ಕ್ಲಸ್ಟರ್ ವ್ಯಾಪ್ತಿಯ ಶಾಲೆಗಳಿಗೆ ರಜೆ

ಪ್ರಗತಿವಾಹಿನಿ ಸುದ್ದಿ, ಖಾನಾಪುರ: ತಾಲ್ಲೂಕಿನಲ್ಲಿ ಸುರಿಯುತ್ತಿರುವ ಅತೀವೃಷ್ಟಿಯಿಂದಾಗಿ ರಸ್ತೆ, ಸೇತುವೆಗಳ ಮೇಲೆ ನೀರು ಹರಿಯುತ್ತಿರುವ ಕಾರಣ ಶುಕ್ರವಾರ ಜು.೧೫ರಂದು ತಾಲ್ಲೂಕಿನ ಗುಂಜಿ ಮತ್ತು ಜಾಂಬೋಟಿ ಹೋಬಳಿ ವ್ಯಾಪ್ತಿಯ ೧೧ ಕ್ಲಸ್ಟರ್ ಗಳ ವ್ಯಾಪ್ತಿಯಲ್ಲಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ರಜೆ ಘೋಷಿಸಿ ಬಿಇಒ ಲಕ್ಷ್ಮಣರಾವ್ ಯಕ್ಕುಂಡಿ ಆದೇಶಿಸಿದ್ದಾರೆ.
ಲೋಂಡಾ, ಗುಂಜಿ, ಶಿರೋಲಿ, ನೀಲಾವಡೆ, ಮೊಹೀಶೇತ, ನಾಗರಗಾಳಿ, ಹಲಗಾ, ಬಿಜಗರ್ಣಿ, ಜಾಂಬೋಟಿ, ಬೈಲೂರು, ಕಣಕುಂಬಿ ಕ್ಲಸ್ಟರ್ ವ್ಯಾಪ್ತಿಯ ಸರ್ಕಾರಿ, ಅನುದಾನಿತ, ಅನುದಾನ ರಹಿತ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಿಗೆ ರಜೆ ಘೋಷಿಸಿರುವುದಾಗಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಬೆಳಗಾವಿ ಜಿಲ್ಲೆಯಲ್ಲಿ ಶಾಲೆಗಳಿಗೆ ರಜೆ ಕುರಿತು ಜಿಲ್ಲಾಧಿಕಾರಿ ಹೇಳಿದ್ದೇನು?




