
ಸಚಿವ ಸಿ.ಟಿ.ರವಿ ಅವರಿಗೂ ಕೊರೋನಾ ಪಾಸಿಟಿವ್
ಪ್ರಗತಿವಾಹಿನಿ ಸುದ್ದಿ, ಬೆಂಗಳೂರು – ರಾಜ್ಯದಲ್ಲಿ ಕೊರೋನಾ ದಿನದಿಂದ ದಿನಕ್ಕೆ ಹೆಚ್ಚುತ್ತ ಸಾಗುತ್ತಿದ್ದು, ಇಂದು ಒಂದೇ ದಿನ ರಾಜ್ಯದಲ್ಲಿ 2798 ಜನರಿಗೆ ಸೋಂಕು ದೃಢಪಟ್ಟಿದೆ.
ಬೆಂಗಳೂರಿನಲ್ಲಿ 1533 ಜನರಿಗೆ ಸೋಂಕು ತಗುಲಿದೆ. ಇಂದು ಒಟ್ಟೂ 70 ಜನರು ಸಾವನ್ನಪ್ಪಿದ್ದಾರೆ. ಬೆಂಗಳೂರಿನಲ್ಲಿ 23 ಜನರು ಸಾವಿಗೀಡಾಗಿದ್ದಾರೆ.
ದಕ್ಷಿಣ ಕನ್ನಡದಲ್ಲಿ 186, ಉಡುಪಿ 90, ಮೈಸೂರು 83, ತುಮಕೂರು 78, ಧಾರವಾಡ 77, ಯಾದಗಿರಿ 74, ದಾವಣಗೆರೆ 72, ಕಲಬುರಗಿ, ಬಳ್ಳಾರಿ 65, ಬೀದರ್ 63, ವಿಜಯಪುರ 48, ಉತ್ತರ ಕನ್ನಡ, ಗದಗ 40, ಬಾಗಲಕೋಟೆ 37, ಹಾಸನ 34, ರಾಮನಗರ 30, ಶಿವಮೊಗ್ಗ 26, ಮಂಡ್ಯ, ಕೊಪ್ಪಳ 23, ಚಿಕ್ಕಬಳ್ಳಾಪುರ 20, ಚಾಮರಾಜನಗರ 17, ಹಾವೇರಿ 16, ರಾಯಚೂರು 14, ಕೋಲಾರ, ಕೊಡಗು 12, ಚಿತ್ರದುರ್ಗ 9, ಬೆಂಗಳೂರು ಗ್ರಾಮಾಂತರ 5, ಬೆಳಗಾವಿ, ಚಿಕ್ಕಮಗಳೂರು 3 ಜನರಿಗೆ ಸೋಂಕು ಪತ್ತೆಯಾಗಿದೆ.
ಈ ಮಧ್ಯೆ ಮಂಗಳವಾರ ರಾತ್ರಿಯಿಂದ ಬೆಂಗಳೂರು ಮತ್ತು ಬೆಂಗಳೂರು ಗ್ರಾಮಾಂತರದಲ್ಲಿ ಒಂದು ವಾರ ಲಾಕ್ ಡೌನ್ ಮಾಡಲು ಸರಕಾರ ನಿರ್ಧರಿಸಿದೆ. ಇಡೀ ರಾಜ್ಯಕ್ಕೆ ಲಾಕ್ ಡೌನ್ ಮಾಡಬೇಕೋ ಬೇಡವೋ ಎನ್ನುವ ಕುರಿತು ಇನ್ನೂ ನಿರ್ಧಾರವಾಗಿಲ್ಲ. ಈ ಬಗ್ಗೆ ಸೋಮವಾರ ಘೋಷಣೆ ಸಾಧ್ಯತೆ ಇದೆ.
ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ 8 ಜನ ಬೆಂಗಳೂರಿನ ಉಸ್ತುವಾರಿಗಳ ಜೊತೆ ಚರ್ಚಿ ನಡೆಸಿದ್ದಾರೆ. ಚರ್ಚೆಯ ನಂತರ ಬೆಂಗಳೂರು ನಗರ ಮತ್ತು ಗ್ರಾಮಾಂತರ ಜಿಲ್ಲೆಯಲ್ಲಿ ಲಮಂಗಳವಾರ ರಾತ್ರಿ 8 ಗಂಟೆಯಿಂದ ಲಾಕ್ ಡೌನ್ ಬಗ್ಗೆ ಘೋಷಿಸಿದ್ದಾರೆ.
ರಾಜ್ಯ ಪ್ರವಾಸೋದ್ಯಮ ಸಚಿವ ಸಿ.ಟಿ.ರವಿ ಅವರಿಗೂ ಕೊರೋನಾ ಪಾಸಿಟಿವ್ ಬಂದಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ