ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ದ್ವಿತೀಯ ಪಿಯು ಪರೀಕ್ಷೆ ಸಂದರ್ಭದಲ್ಲಿಯೇ ರಾಷ್ಟ್ರೀಯ ಪರೀಕ್ಷಾ ಪ್ರಾಧಿಕಾರ ಜಂಟಿ ಪ್ರವೇಶ ಪರೀಕ್ಷೆ (JEE) ಪರೀಕ್ಷೆ ನಡೆಯಲಿದ್ದು, ವಿದ್ಯಾರ್ಥಿಗಳು ಸಂಕಷ್ಟಕ್ಕೆ ಸಿಲುಕಿದ್ದಾರೆ.
ಜೆಇಇ ಪರೀಕ್ಷಾ ದಿನಾಂಕ ಪ್ರಕಟವಾಗಿದ್ದು, ಏಪ್ರಿಲ್ 16ರಿಂದ 21ವರೆಗೆ ಪರೀಕ್ಷೆ ನಡೆಯಲಿದೆ. ಇದೇ ಸಂದರ್ಭದಲ್ಲಿ ದ್ವಿತಿಯ ಪಿಯು ಪರೀಕ್ಷೆ ಕೂಡ ನಡೆಯಲಿದೆ. ಏಪ್ರಿಲ್ 16ರಿಂದ ಮೇ 6ರವರೆಗೆ ದ್ವಿತೀಯ ಪಿಯು ಪರೀಕ್ಷೆ ನಡೆಸಲು ಪದವಿ ಪೂರ್ವ ಶಿಕ್ಷಣ ಮಂಡಳಿ ಈಗಾಗಲೇ ವೇಳಾ ಪಟ್ಟಿ ಬಿಡುಗಡೆ ಮಾಡಿದೆ.
ಐಐಟಿಗಳಿಗೆ ಪ್ರವೇಶ ಕಲ್ಪಿಸಲು ಜೆಇಇ ಪರೀಕ್ಷೆ ನಡೆಸಲಾಗುತ್ತದೆ. ರಾಷ್ಟ್ರೀಯ ಪರೀಕ್ಷಾ ಸಂಸ್ಥೆ ಎನ್ ಟಿಎ (NTA) ನಿನ್ನೆ ವೇಳಾಪಟ್ಟಿ ಪ್ರಕಟಿಸಿದ್ದು, ಜೆಇಇ ಮುಖ್ಯ ಪರೀಕ್ಷೆಗಳು ಏಪ್ರಿಲ್ 16ರಿಂದ 21ರವರೆಗೆ ಮತ್ತು ಎರಡನೇ ಹಂತದ ಪರೀಕ್ಷೆಗಳು ಮೇ 24 ರಿಂದ 29ರವರೆಗೂ ನಡೆಯಲಿದೆ. ದ್ವಿತೀಯ ಪಿಯು ಹಾಗೂ ಜೆಇಇಯ ಪರೀಕ್ಷೆಗಳು ಒಂದೇ ಸಮಯಕ್ಕೆ ನಡೆಯುವ ಹಿನ್ನೆಲೆ ವಿದ್ಯಾರ್ಥಿಗಳಿಗೆ ಗೊಂದಲ ಶುರುವಾಗಿದೆ.
ವಿದ್ಯಾರ್ಥಿಗಳ ಸಂಕಷ್ಟ ಕೇಂದ್ರ ಸರ್ಕಾರಕ್ಕೆ ಅರ್ಥವಾಗುತ್ತಿಲ್ಲವೇ?
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ