ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: 2020-21ನೆ ಸಾಲಿನ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಗೊಂಡಿದ್ದು, ಕೋವಿಡ್ ಕಾರಣದಿಂದಾಗಿ ಇದೇ ಮೊದಲಬಾರಿಗೆ ವಿದ್ಯಾರ್ಥಿ ಗಳಿಗೆ ಪರೀಕ್ಷೆ ಇಲ್ಲದೇ ಪಾಸ್ ಮಾಡಲಾಗಿದೆ ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಚಿವರು ದ್ವಿತೀಯ ಪಿಸಿ ಫಲಿತಾಂಶ ಘೋಷಿಸಿದರು. ಎಸ್.ಎಸ್.ಎಲ್.ಸಿ ಹಾಗೂ ಪ್ರಥಮ ಪಿಯು ಫಲಿತಾಂಶ ಮತ್ತು ಶೇ.10ರಷ್ಟು ಆಂತರಿಕ ಅಂಕಗಳನ್ನು ಪರಿಗಣಿಸಿ ಈ ಬಾರಿ ದ್ವಿತೀಯ ಪಿಯು ಫಲಿತಾಂಶ ಪ್ರಕಟಿಸಲಾಗಿದ್ದು, ಯಾವುದೇ ವಿದ್ಯಾರ್ಥಿಗಳಿಗೆ ಅನ್ಯಾಯವಾಗದಂತೆ ಫಲಿತಾಂಶ ನೀಡಲಾಗಿದೆ.
ಒಟ್ಟು 6,66,499ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದು, 4,57,706 ವಿದ್ಯಾರ್ಥಿಗಳು ಡಿಸ್ಟಿಂಗ್ ಶನ್ ಹಾಗೂ ಫಸ್ಟ್ ಕ್ಲಾಸ್ ನಲ್ಲಿ ಮತ್ತು 1,47,055 ವಿದ್ಯಾರ್ಥಿಗಳು ಸೆಕೆಂಡ್ ಕ್ಲಾಸ್ ನಲ್ಲಿ ಹಾಗೂ 68,759 ವಿದ್ಯಾರ್ಥಿಗಳು ಜಸ್ಟ್ ಪಾಸ್ ಆಗಿದ್ದಾರೆ. ಈ ಫಲಿತಾಂಶದ ಬಗ್ಗೆ ವಿದ್ಯಾರ್ಥಿಗಳಿಗೆ ಅಸಮಾಧಾನವಿದ್ದರೆ ಆಗಸ್ಟ್ ನಲ್ಲಿ ಪರೀಕ್ಷೆ ಬರೆಯಬಹುದಾಗಿದೆ ಎಂದು ತಿಳಿಸಿದರು.
ಶಿಕ್ಷಣ ಇಲಾಖೆಯ ವೆಬ್ ಸೈಟ್ www.pue.kar.nic.in ನಲ್ಲಿ ಫಲಿತಾಂಶ ಲಭ್ಯವಿದೆ.
ಬಿಜೆಪಿ ಹೈಕಮಾಂಡ್ ಗೆ ಮಠಾಧೀಶರ ಎಚ್ಚರಿಕೆ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ