ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ವಿದ್ಯಾರ್ಥಿ ಜೀವನದ ಪ್ರಮುಖ ಘಟ್ಟ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾಗಿದೆ. ಈ ಬಾರಿ ಶೇ.74.64 ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದಾರೆ.
ದ್ವಿತೀಯ ಪಿಯುಸಿಯಲ್ಲಿ 5,24,209 ವಿದ್ಯಾರ್ಥಿಗಳು ಪಾಸ್ ಆಗಿದ್ದಾರೆ. ದ್ವಿತೀಯ ಪಿಯು ಪರೀಕ್ಷೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಗೆ ಪ್ರಥಮ ಸ್ಥಾನ ಬಂದಿದೆ.
ಉಡುಪಿ ಜಿಲ್ಲೆ ಎರಡನೇ ಸ್ಥಾನ, ಕೊಡಗು ಜಿಲ್ಲೆ ಮೂರನೇ ಸ್ಥಾನ ಹಾಗೂ ಉತ್ತರ ಕನ್ನಡ ಜಿಲ್ಲೆ ನಾಲ್ಕನೇ ಸ್ಥಾನ ಪಡೆದಿದೆ. ಯಾದಗಿರಿ ಜಿಲ್ಲೆ ಕೊನೇ ಸ್ಥಾನದಲ್ಲಿದೆ.
ಕಲಾ ವಿಭಾಗದಲ್ಲಿ ಬೆಂಗಳೂರಿನ ಜಯನಗರದ NMKRV ಕಾಲೇಜು ವಿದ್ಯಾರ್ಥಿನಿ ತಬ್ಸುಮ್ ರಾಜ್ಯಕ್ಕೆ ಪ್ರಥಮ ಸ್ಥಾನ ಬಂದಿದ್ದು, 600ಕ್ಕೆ 593 ಅಂಕಗಳನ್ನು ಪಡೆದಿದ್ದಾರೆ.
ವಾಣಿಜ್ಯ ವಿಭಾಗದಲ್ಲಿ ಮೂಡಬಿದರೆಯ ಆಳ್ವಾಸ್ ಕಾಲೇಜಿನ ವಿದ್ಯಾರ್ಥಿನಿ ಅನನ್ಯಾ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದುಕೊಂದಿದ್ದು, 600ಕ್ಕೆ 600 ಅಂಕಗಳನ್ನು ಪಡೆದಿದ್ದಾರೆ
ವಿಜ್ಞಾನ ವಿಭಾಗದಲ್ಲಿ ಕೋಲಾರದ ಗಂಗೋತ್ರಿ ಕಾಲೇಜಿನ ಕೌಶಿಕ್ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದುಕೊಂಡಿದ್ದು 600ಕ್ಕೆ 596 ಅಂಕ ಪಡೆದಿದ್ದಾರೆ.
https //karresults.nic.in 2023 ಈ ವೆಬ್ ಸೈಟ್ ನಲ್ಲಿ ಫಲಿತಾಂಶ ಲಭ್ಯವಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ