
ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ದ್ವಿತೀಯ ಪಿಯು ವಿದ್ಯಾರ್ಥಿಗಳನ್ನು ಪರೀಕ್ಷೆ ಇಲ್ಲದೇ ಪಾಸ್ ಮಾಡುವ ನಿರ್ಧಾರಕ್ಕೆ ಹೈಕೋರ್ಟ್ ತಡೆ ನೀಡಿದ್ದು, ಈ ಬಗ್ಗೆ ಮಾಹಿತಿ ನೀಡುವಂತೆ ಸರ್ಕಾರಕ್ಕೆ ಸೂಚನೆ ನೀಡಿದೆ.
ದ್ವಿತೀಯ ಪಿಯು ರಿಪೀಟರ್ಸ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್, ರೆಗ್ಯೂಲರ್ ವಿದ್ಯಾರ್ಥಿಗಳನ್ನು ಪರೀಕ್ಷೆ ಇಲ್ಲದೇ ಪಾಸ್ ಮಾಡಿ, ರಿಪೀಟರ್ಸ್ ಗೆ ಮಾತ್ರ ಪರೀಕ್ಷೆ ನಡೆಸುವ ತಾರತಮ್ಯ ಸರಿಯಲ್ಲ. ಪಾಸ್ ಮಾಡುವುದಾದರೆ ಎಲ್ಲರನ್ನೂ ಪಾಸ್ ಮಾಡಬೇಕು. ರಿಪೀಟರ್ಸ್ ಗೆ ಮಾತ್ರ ಪರೀಕ್ಷೆ ನಡೆಸುತ್ತಿರುವ ಉದ್ದೇಶದ ಬಗ್ಗೆ ಸರ್ಕಾರ ನ್ಯಾಯಾಲಯಕ್ಕೆ ಮಾಹಿತಿ ನೀಡಲಿ. ಸಧ್ಯಕ್ಕೆ ದ್ವಿತೀಯ ಪಿಯು ಫಲಿತಾಂಶ ಪ್ರಕಟಿಸಿದಂತೆ ಆದೇಶ ನೀಡಿದೆ.
ಎರಡು ದಿನಗಳಲ್ಲಿ ಸರ್ಕಾರ ಈ ಬಗ್ಗೆ ಸಂಪೂರ್ಣ ಮಾಹಿತಿ ನೀಡುವಂತೆಯೂ ಸೂಚನೆ ನೀಡಿದೆ.
17 ಜನ ಬಂದ ನಂತರ ಬಿಜೆಪಿಯಲ್ಲಿ ಗೊಂದಲ: ಈಶ್ವರಪ್ಪ ಬಹಿರಂಗ ಹೇಳಿಕೆ (ವಿಡಿಯೋ ಸಹಿತ)