Latest

ದ್ವಿತೀಯ ಪಿಯುಸಿ ಪರೀಕ್ಷೆ: ಕೆಲವೆಡೆ ಸಾಮಾಜಿಕ ಅಂತರ ಮರೆತ ಪರೀಕ್ಷಾ ಕೇಂದ್ರ

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಕೊರೋನಾ ಲಾಕ್ ಡೌನ್ ಹಿನ್ನೆಲೆಯಲ್ಲಿ ಮುಂದೂಡಿಕೆಯಾಗಿದ್ದ ದ್ವಿತೀಯ ಪಿಯುಸಿಯ ಇಂಗ್ಲೀಷ್ ಪರೀಕ್ಷೆ ಇಂದು ನಡೆಯುತ್ತಿದ್ದು, ಈಗಾಗಲೇ ಪರೀಕ್ಷೆ ಆರಂಭವಾಗಿದೆ.

ಬೆಳಿಗ್ಗೆ 10:15ಕ್ಕೆ ರಾಜ್ಯಾದ್ಯಂತ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳು ಇಂಗ್ಲಿಷ್ ಪರೀಕ್ಷೆ ಬರೆಯುತ್ತಿದ್ದಾರೆ. ಎಲ್ಲ ವಿದ್ಯಾರ್ಥಿಗಳಿಗೆ ಥರ್ಮಲ್ ಸ್ಕ್ರೀನಿಂಗ್ ಮಾಡಿ ಪರೀಕ್ಷಾ ಕೊಠಡಿಗೆ ಬಿಡಲಾಗಿದೆ ಆದರೆ ಪರೀಕ್ಷಾ ಕೇಂದ್ರಗಳಲ್ಲಿ ಸಾಮಾಜಿಕ ಅಂತರ ಅಷ್ಟಾಗಿ ಕಾಯ್ದುಕೊಳ್ಳದೇ ಇರುವುದು ಆತಂಕಕ್ಕೆ ಕಾರಣವಾಗಿದೆ. ಒಂದು ಕೊಠಡಿಯಲ್ಲಿ 20ಕ್ಕೂ ಹೆಚ್ಚು ವಿದ್ಯಾರ್ಥಿಗಳನ್ನು ಕೂರಿಸಲಾಗಿದೆ.

ಲಾಕ್​ಡೌನ್ ಘೋಷಣೆ ಆದ ಬಳಿಕ ಇಂದು ರಾಜ್ಯದಲ್ಲಿ ಮೊದಲ ಪರೀಕ್ಷೆ ನಡೆಯುತ್ತಿದೆ. ಕರ್ನಾಟಕದ 1,016 ಕೇಂದ್ರಗಳಲ್ಲಿ ವಿದ್ಯಾರ್ಥಿಗಳು ಪರೀಕ್ಷೆ ಬರೆಯುತ್ತಿದ್ದಾರೆ. ಇಂದು ಒಟ್ಟಾರೆ 5,95,997 ವಿದ್ಯಾರ್ಥಿಗಳು ಪಿಯುಸಿ ಪರೀಕ್ಷೆ ಬರೆಯುತ್ತಿದ್ದಾರೆ. ಪರೀಕ್ಷೆ ಬರೆಯುತ್ತಿರುವ ಎಲ್ಲ ವಿದ್ಯಾರ್ಥಿಗಳು ಕಡ್ಡಾಯವಾಗಿ ಮಾಸ್ಕ್ ಧರಿಸಿ ಪರೀಕ್ಷೆಗೆ ಹಾಜರಾಗಿದ್ದಾರೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button