
ಪ್ರಗತಿವಾಹಿನಿ ಸುದ್ದಿ: ದ್ವಿತೀಯ ಪಿಯುಸಿ ಫಲಿತಾಂಶದ ಗೊಂದಲಕ್ಕೆ ತೆರೆ ಬಿದ್ದಿದ್ದು, ನಾಳೆ ಅಂದರೆ ಏಪ್ರಿಲ್ 9 ರಂದು ಫಲಿತಾಂಶ ಪ್ರಕಟಣೆಯಾಗಲಿದೆ ಎಂದು ಪರೀಕ್ಷಾ ಮಂಡಳಿಯ ಅಧಿಕಾರಿಗಳು ತಿಳಿಸಿದ್ದಾರೆ.
ನಾಳೆ ಬೆಳಿಗ್ಗೆ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಸುದ್ದಿಗೋಷ್ಠಿ ನಡೆಸಿ ಫಲಿತಾಂಶ ಪ್ರಕಟಿಸಲಿದ್ದಾರೆ. ನಂತರ ಮಧ್ಯಾಹ್ನ 3ಗಂಟೆಗೆ ಅಧಿಕೃತ ವೆಬ್ಸೈಟ್ನಲ್ಲಿ ರಿಸಲ್ಟ್ ಲಭ್ಯವಿರಲಿದೆ.
ಇದೇ ಮೊದಲ ಬಾರಿಗೆ ವಿದ್ಯಾರ್ಥಿಗಳ ಫಲಿತಾಂಶದ ಅಂಕಪಟ್ಟಿಯನ್ನು ಡಿಜಿಲಾಕರ್ ಮೂಲಕ ಲಭ್ಯವಾಗಲಿದೆ. ಒಂದು ವೇಳೆ ವೆಬ್ಸೈಟ್ನಲ್ಲಿ ರಿಸಲ್ಟ್ ನೋಡುವಾಗ ಸರ್ವರ್ ಸಮಸ್ಯೆ ಎದುರಾದರೆ ಡಿಜಿಲಾಕರ್ ಮೂಲಕವೇ ಮಾರ್ಕ್ಸ್ ಕಾರ್ಡ್ ಪಡೆದುಕೊಳ್ಳಬಹುದು.



