Latest

ತಲೆಗೆ ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಶರಣಾದ ಪಿಯು ವಿದ್ಯಾರ್ಥಿ

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಆರ್ಮಿ ಸ್ಕೂಲ್ ನಲ್ಲಿ ದ್ವಿತೀಯ ಪಿಯುಸಿ ಓದುತ್ತಿದ್ದ ವಿದ್ಯಾರ್ಥಿಯೋರ್ವ ತನಗೆ ತಾನೇ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

ರಾಹುಲ್ ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ. ರಾಹುಲ್ ಮುಂಜಾನೆ 3 ಗಂಟೆಗೆ ಎದ್ದು ಓದುತ್ತಿದ್ದ. ಒಮ್ಮೊಮ್ಮೆ ಒತ್ತಡ ಹೆಚ್ಚಿದಾಗ ಬೆಳಿಗ್ಗೆ ವಾಕಿಂಗ್ ಹೋಗುತ್ತಿದ್ದ ಎನ್ನಲಾಗಿದೆ.

ಅಂತೆಯೇ ಇಂದು ಮುಂಜಾನೆ ಎದ್ದು ವಾಕಿಂಗ್ ಹೋಗಿದ್ದು, ಹೋಗುವಾಗ ಮನೆಯಲ್ಲಿದ್ದ ಪಿಸ್ತೂಲ್ ತೆಗೆದುಕೊಂಡು ಹೋಗಿದ್ದಾನೆ. ವಾಕಿಂಗ್ ಹೋದವನು ತನ್ನ ತಲೆಯ ಎಡಭಾಗಕ್ಕೆ ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ.

ಮಗ ಮನೆಗೆ ಬಾರದಿರುವುದನ್ನು ಗಮನಿಸಿದ ಮೊಬೈಲ್ ಗೆ ಕರೆ ಮಾಡಿದ್ದಾರೆ. ಆದರೆ ಮೊಬೈಲ್ ಕೂಡ ಸ್ವಿಚ್ಡ್ ಆಫ್ ಆಗಿದೆ. ಕೆಲ ಘಂಟೆಗಳಲ್ಲೇ ಪೊಲೀಸರು ಪೋಷಕರಿಗೆ ಮಗ ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಮಾಹಿತಿ ನೀಡಿದ್ದಾರೆ.

Home add -Advt

ಉತ್ತರಾಖಂಡ ಮೂಲದ ನಿವೃತ್ತ ಸೇನಾಧಿಕಾರಿ ಭಗತ್ ಸಿಂಗ್ ಹಾಗೂ ಬಾಬ್ನಾ ದಂಪತಿಗಳ ಮಗ ರಾಹುಲ್ ಎಸ್ ಎಸ್ ಎಲ್ ಸಿಯಲ್ಲಿ ಶೇ.90ರಷ್ಟು ಅಂಕ ಪಡೆದಿದ್ದ. ವಿದ್ಯಾಭಾಸಕ್ಕೂ ಮನೆಯವರಿಂದ ಯವೌದೇ ಒತ್ತಡವಿರಲಿಲ್ಲ. ಸಂಜಯ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related Articles

Back to top button